Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

45 ಲಕ್ಷ ರೂ.ಗಳಿಗಿಂತಲೂ ಕಡಿಮೆ ಮೌಲ್ಯದ ಮನೆ ನೋಂದಣಿ ಮುದ್ರಾಂಕ ಶುಲ್ಕ ಶೇ.5ರಿಂದ ಶೇ.3ಕ್ಕೆ ಇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 45 ಲಕ್ಷ ರೂ.ಗಳಿಕ್ಕಿಂತಲೂ ಕಡಿಮೆ ಮೌಲ್ಯದ ಮನೆ ನೋಂದಣಿ ವೇಳೆ ಇದ್ದ ಮುದ್ರಾಂಕ ಶುಲ್ಕವನ್ನು ಶೇ. 5ರ ಬದಲಿಗೆ ಶೇ.3ಕ್ಕೆ ಇಳಿಸುವ ವಿಚಾರ ವಿಧೇಯಕದ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಪ್ರಸ್ತಾಪಿಸಿದರು.

ಕಳೆದ ಬಜೆಟ್ ಭಾಷಣದಲ್ಲಿಯೇ ಈ ವಿಚಾರವನ್ನು ಹಣಕಾಸು ಸಚಿವರೂ ಆಗಿದ್ದ ಬಿ.ಎಸ್.ಯಡಿಯೂರಪ್ಪ ನಮೂದಿಸಿದ್ದರು. ಹೀಗಾಗಿ ಮುದ್ರಾಂಕ ಶುಲ್ಕ ಕಡಿತಕ್ಕೆ ಅವಕಾಶ ನೀಡುವ ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿಯಿತು.

ವಿಧೇಯಕದ ಬಗ್ಗೆ ಮಾತನಾಡಿದ ಶಾಸಕ ಸಾ.ರಾ.ಮಹೇಶ್, ಬಿಲ್ಡರ್​ಗಳಿಗೆ ಸಹಾಯ ಮಾಡಲೆಂದು ವಿಧೇಯಕ ಮಂಡಿಸಿದ್ದೀರಿ, ನಿಜಕ್ಕೂ ಬಡವರಿಗೆ ಸಹಾಯ ಮಾಡುವ ಉದ್ದೇಶ ನಿಮ್ಮದಾಗಿದ್ದರೆ ನಿವೇಶನಗಳಿಗೂ ರಿಯಾಯಿತಿ ನೀಡಿ ಎಂದರು.

ಈ ವೇಳೆ ನಿವೇಶನ ಖರೀದಿಗೂ ಮುದ್ರಾಂಕ ಶುಲ್ಕ ವಿನಾಯಿತಿ ನೀಡುವಂತೆ ಸದಸ್ಯರು ಸಲಹೆ ಮಾಡಿದರು. ಗೃಹ ನಿರ್ಮಾಣ ಚಟುವಟಿಕೆಗೆ ಬಳಕೆಯಾಗುವ ಎಲ್ಲ ಆಸ್ತಿಗಳ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ಕೊಡಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಬಡವರಿಗೆ ಸಹಾಯ ಮಾಡುವುದೇ ಉದ್ದೇಶವಾಗಿದ್ದರೆ ಮುದ್ರಾಂಕ ಮೌಲ್ಯವನ್ನು ಶೇ. 3ರ ಬದಲು ಶೇ.1ಕ್ಕೆ ಇಳಿಸಿ ಎಂದು ಮಾಜಿ ಸ್ಪೀಕರ್ ರಮೇಶ್​ ಕುಮಾರ್ ಆಗ್ರಹಿಸಿದರು. ಕಾವೇರಿದ ಚರ್ಚೆಯ ಬಳಿಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕಕ್ಕೆ ಸದನದ ಅಂಗೀಕಾರ ದೊರೆಯಿತು.

ಧಾರ್ಮಿಕ ಕೇಂದ್ರಗಳ ತೆರವಿಗೆ ಹೊಸ ನಿಯಮಾವಳಿ: 
ದೇಗುಲಗಳ ತೆರವು ವಿಚಾರವಾಗಿ ಇತ್ತೀಚೆಗೆ ಬಹಳಷ್ಟು ವಾದ- ವಿವಾದ ಸೃಷ್ಟಿಯಾಗಿದ್ದವು. ಈ ಬಗ್ಗೆ ವಿಧೇಯಕದ ಮೂಲಕ ಹೊಸ ನಿಯಮಾವಳಿ ರೂಪಿಸಲು ಇದೀಗ ಸರ್ಕಾರ ನಿರ್ಧಾರ ಕೈಗೊಂಡಿದೆ.

ಅದರಂತೆ ಕೋರ್ಟ್​​ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಆಯಾ ಧಾರ್ಮಿಕ ಸ್ಥಳ ಇದ್ದರೆ ಅಂತಹ ಧಾರ್ಮಿಕ ಸಂಸ್ಥೆಗಳನ್ನ ತೆರವು ಮಾಡುವಂತಿಲ್ಲ ಎಂದು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ತೀರ್ಮಾನಿಸಿದೆ.

ಸರ್ಕಾರದ ನಿಯಮಗಳಿಂದ ಹೊರಗಿದ್ದರೆ ಮಾತ್ರ ಅಂತಹ ಧಾರ್ಮಿಕ ಸ್ಥಳ ತೆರವು ಮಾಡಬಹುದು. ಅಂತಹ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳು ಮಾತ್ರ ತೆರವು ಮಾಡಬಹುದು. ವಿಧೇಯಕ ಅಂಗೀಕಾರಗೊಂಡ ಬಳಿಕ ಈ ನಿಯಮಾವಳಿ ಜಾರಿ ಆಗಲಿದೆ. ಶೀಘ್ರದಲ್ಲೇ ಸರ್ಕಾರ ನಿಯಮಾವಳಿ ರೂಪಿಸುವ ಸಾಧ್ಯತೆ ಇದೆ.

ವಿಧೇಯಕದ ಮೂಲಕ ಹೊಸ ನಿಯಾಮವಳಿ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ. ನ್ಯಾಯಾಲಯದ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಇದ್ದರೆ ಆ ಧಾರ್ಮಿಕ ಸಂಸ್ಥೆಗಳನ್ನ ತೆರವು ಮಾಡುವಂತಿಲ್ಲ. ಸರ್ಕಾರದ ನಿಯಮಾವಳಿಯಿಂದ ಹೊರಗೆ ಇದ್ದರೆ ಆ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳು ಮಾತ್ರ ತೆರವು ಮಾಡಬಹುದು. ಈ ವಿಧೇಯಕ ಅಂಗೀಕಾರಗೊಂಡ ಬಳಿಕ ಶೀಘ್ರದಲ್ಲೇ ನಿಯಮಾವಳಿ ರೂಪಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿದ ಬಳಿಕ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳನ್ನ ಹೊಸದಾಗಿಯೂ ನಿರ್ಮಿಸಲು ಅವಕಾಶ ಇರುವುದಿಲ್ಲ. ಸರ್ಕಾರಕ್ಕೆ ಸೇರಿದ ಜಾಗದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಂದೆ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್