Breaking NewsNEWSನಮ್ಮರಾಜ್ಯ

ಸಾರಿಗೆ ನೌಕರರ ಸಮಸ್ಯೆ ನಿವಾರಿಸದಿದ್ದರೆ ನಾನು ಬೀದಿಗಿಳಿಯುವೆ : ಸಚಿವ ಶ್ರೀರಾಮುಲುಗೆ ಯತ್ನಾಳ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ನಗರದ ತಮ್ಮ ಶಾಸಕರೊಬ್ಬರ ಮನೆಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಎಂಡಿಗಳನ್ನು ಕರೆಸಿಕೊಂಡು ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ, ವರ್ಗಾವಣೆ ಸೇರಿದಂತೆ ಎಲ್ಲ ಪ್ರಕರಣಗಳನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆಗೆ ಇಂದು (ನ.12) ಮಧ್ಯಾಹ್ನ ಸಚಿವ ಶ್ರೀರಾಮುಲು, ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ ಮತ್ತು ಬಿಎಂಟಿಸಿ ಎಂಡಿ ಅನ್ಬುಕುಮಾರ್‌ ಆಗಮಿಸಿ ನೌಕರರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಸುಮಾರು 2ಗಂಟೆಗಳ ಕಾಲ ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ.

ಈ ವೇಳೆ ಮುಷ್ಕರದಲ್ಲಿ ಆಗಿರುವ ಸಮಸ್ಯೆಯನ್ನು ಶೀಘ್ರ ಸರಿಪಡಿಸುವಂತೆ ಯತ್ನಾಳ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದಕ್ಕೆ ಅಧಿಕಾರಿಗಳು ಕೊಟ್ಟ ಉತ್ತರದಿಂದ ಬೇಸರಗೊಂಡ ಯತ್ನಾಳ್‌ ಅವರು, ಸಚಿವ ಶ್ರೀರಾಮುಲು ಅವರ ಕಡೆಗೆ ನೋಡುತ್ತ ನೀವು ಅಧಿಕಾರಿಗಳು ಹೇಳಿದಂತೆ ಕೇಳಿಕೊಂಡು ಕುಳಿತುಕೊಂಡರೆ ನಾನು ನೌಕರರೊಂದಿಗೆ ಬೀದಿಗಿಳಿದು ಮುಷ್ಕರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಾತನ್ನು ಕೇಳಿ ತಬ್ಬಿಬ್ಬಾದಂತೆ ಕಂಡ ಸಚಿವರು ಇಲ್ಲ ಬೇಡಬೇಡ ನೀವು ನಮ್ಮ ಪಕ್ಷದ ಶಾಸಕರಾಗಿ ಈ ಮಾತನ್ನು ಹೇಳಬೇಡಿ ನಾನು ಇನ್ನು 10 ದಿನದೊಳಗೆ ವಜಾಗೊಂಡಿರುವ ಎಲ್ಲ ನೌಕರರನ್ನು ಒಂದೇ ಬಾರಿಗೆ ಮರು ನಿಯೋಜನೆ ಮಾಡಿಸುತ್ತೇನೆ ಈ ಬಗ್ಗೆ ನೀವು ಚಿಂತೆ ಮಾಡಬೇಡಿ ಎಂದು ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಅಧಿಕಾರಿಗಳು ಅಮಾಯಕ ನೌಕರರಿಗೆ ವಜಾ, ವರ್ಗಾವಣೆ, ಅಮಾನತು ಶಿಕ್ಷೆ ಜತೆಗೆ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಆ ಎಲ್ಲ ಪ್ರಕರಣಗಳನ್ನು ಬೆಣ್ಣೆಯಲ್ಲಿ ಕೂದಲು ತೆಗೆದಂತೆ ವಾಪಸ್‌ ಪಡೆಯುವ ಮೂಲಕ ನೌಕರರಿಗೆ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸಬೇಕು ಎಂದು ತಿಳಿಸಿದರು.

ಅಲ್ಲದೆ ನನಗೆ ಮೈಸೂರು, ಚಾಮರಾಜನಗರ, ಬಳ್ಳಾರಿ, ಮಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಿಂದಲೂ ನೌಕರರು ದೂರು ನೀಡುತ್ತಿದ್ದಾರೆ. ನಾವು ಏನು ತಪ್ಪು ಮಾಡದಿದ್ದರೂ ವಜಾ, ವರ್ಗಾವಣೆ ಶಿಕ್ಷೆ ಸೇರಿ ಹಲವು ರೀತಿ ಕಿರುಕುಳ ನೀಡುತ್ತಿದ್ದಾರೆ ಎಂದು. ಈ ಸಮಸ್ಯೆಗಳು ಮುಂದೆ ಸಾರಿಗೆ ನೌಕರರ ವಲಯದಿಂದ ಕೇಳಿ ಬರದಂತೆ ನೋಡಿಕೋಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಸಚಿವ ಶ್ರೀರಾಮುಲು ಅವರು ನೌಕರರ ಬಗ್ಗೆ ಈ ವೇಳೆ ಕಾಳಜಿ ವ್ಯಕ್ತಪಡಿಸಿದ್ದು, ಅವರಿಗೆ ಯಾವುದೇ ತೊಂದರೆ ಆಗದಂತೆ ನಾನು ಇಲಾಖೆಯ ಸಚಿವನಾಗಿ ಇರುವವರೆಗೂ ನೋಡಿಕೊಳ್ಳುತ್ತೇನೆ ಎಂದು ಯತ್ನಾಳ್‌ ಅವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಕೆಲ ಅಧಿಕಾರಿಗಳು ನಿಮ್ಮ ದಾರಿ ತಪ್ಪಿಸುತ್ತಿದ್ದಾರೆ ಈ ಬಗ್ಗೆ ನೀವು ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಯತ್ನಾಳ್‌ ಅವರು ಕಿವಿ ಮಾತು ಹೇಳಿದರು ಎನ್ನಲಾಗಿದೆ. ಒಟ್ಟಾರೆ ಶ್ರೀರಾಮುಲು ಅವರು ವಜಾಗೊಂಡಿರುವ ನೌಕರರನ್ನು ಈ ನವೆಂಬರ್‌ ತಿಂಗಳು ಕಳೆಯುವುದರೊಳಗಾಗಿ ಮರು ನಿಯೋಜನೆ ಮಾಡಿಕೊಳ್ಳುತ್ತಾರೆ ಎಂಬುವುದು ಬಹುತೇಕ ಸ್ಪಷ್ಟವಾಗಿದೆ.

2 Comments

  • 2020 ra agreements.. Agilla.. 4tingala ninda 1/2 salary kodtidare..5yesrs ayitu payment jasati agilla.. Yella depot gallinda earning target kina jastine bartide..adke..KSRTC nalli 6th pay jaari maadi..plz

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ