Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯ

ವಿಜಯಪಥ ವರದಿ ಪರಿಣಾಮ: ಒಂದೇ ಕಡೆ ಬೇರು ಬಿಟ್ಟಿದ್ದ 19 ಸಾರಿಗೆ ಅಧಿಕಾರಿಗಳ ಎತ್ತಂಗಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಲ್ಯಾಣ ಕರ್ನಾಟಕ  ರಸ್ತೆ ಸಾರಿಗೆಯ  ನಿಗಮದಲ್ಲಿ ಹಲವಾರು ವರ್ಷಗಳಿಂದ ಒಂದೇ ಕಡೆ  ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ಪೈಕಿ 19 ಅಧಿಕಾರಿಗಳನ್ನು ಇಂದು (ಜುಲೈ 14) ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಜುಲೈ 4ರಂದು ನಿಮ್ಮ ನೆಚ್ಚಿನ ವಿಜಯಪಥ ಆನ್‌ಲೈನ್‌ ಪತ್ರಿಕೆ ಹಲವಾರು ವರ್ಷಗಳಿಂದ ಒಂದೇ ಕಡೆ  ಬೇರು ಬಿಟ್ಟುಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳ ವರ್ಗಾವಣೆ ಏಕೆ ಆಗಿಲ್ಲ ಎಂಬ ಬಗ್ಗೆ ಹೈ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ವರದಿ ಪ್ರಕಟಿಸಿತು.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಈ ಬಗ್ಗೆ ಸಾರಿಗೆ ನೌಕರರ ಪರ ಹೈ ಕೋರ್ಟ್‌ನಲ್ಲಿ ವಕಾಲತ್ತು ವಹಿಸಿರುವ ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರ ವಕೀಲರ ತಂಡ ಸದ್ದಿಲ್ಲದೆ ರಿಟ್‌ ಅರ್ಜಿ ಸಲ್ಲಿಸುವ ಸಿದ್ಧತೆಯಲ್ಲಿ ತೊಡಗಿದ್ದು, ಈಗ ಸಾರಿಗೆಯ KSRTC, BMTC, NWKRTC ಮತ್ತು NEKRTC ಸಂಸ್ಥೆಗಳಲ್ಲಿ ಹತ್ತಾರು ವರ್ಷದಿಂದ ಒಂದೇ ಕಡೆ ಬೇರು ಬಿಟ್ಟಿರುವ ಅಧಿಕಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ ಎಂದು ವರದಿ ಬಿತ್ತರಿಸಲಾಗಿತ್ತು.

ಹಲವು ವರ್ಷಗಳಿಂದ ಒಂದೇಕಡೆ ಬೇರು ಬಿಟ್ಟಿರುವ ಸಾರಿಗೆ ಅಧಿಕಾರಿಗಳ ವಿರುದ್ಧ ಶೀಘ್ರವೇ ಹೈ ಕೋರ್ಟ್‌ನಲ್ಲಿ ರಿಟ್‌ ಅರ್ಜಿ !

ಈ ವರದಿಯಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ನಾಲ್ಕೂ ಸಾರಿಗೆ ನಿಗಮಗಳ ಪೈಕಿ  ಕಲ್ಯಾಣ ಕರ್ನಾಟಕ  ರಸ್ತೆ ಸಾರಿಗೆಯ  ನಿಗಮದ  19 ಅಧಿಕಾರಿಗಳನ್ನು ವಿವಿಧೆಡೆಗೆ ವರ್ಗಾವಣೆ ಮಾಡಿ ಇಲಾಖೆಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ವರ್ಗಾವಣೆ ಗೊಂಡ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ….

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ