ಸೆ.5 ರಂದು ಶಿಕ್ಷಕರ ದಿನಚರಣೆ, ಸನ್ಮಾನ ಸಮಾರಂಭ: ಸಿಎಂ ಬೊಮ್ಮಾಯಿ ಉದ್ಘಾಟನೆ
ಹಾವೇರಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ 133ನೇ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ ಅವರ ಘನ ಉಪಸ್ಥಿತಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕೃಷಿ ಸಚಿವರಾದ ಬಿ.ಸಿ.ಪಾಟೀಲ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾದ ನೆಹರು ಚ. ಓಲೇಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಲೋಕಸಭಾ ಸದಸ್ಯ ಶಿವಕುಮಾರ ಚ. ಉದಾಸಿ, ವಿಧಾನ ಪರಿಷತ್ ಶಾಸಕರಾದ ಶ್ರೀನಿವಾಸ ಮಾನೆ, ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ, ಶಾಸಕರಾದ ವಿರುಪಾಕ್ಷಪ್ಪ ರುದ್ರಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ವಿಧಾನ ಪರಿಷತ್ ಶಾಸಕ ಆರ್.ಶಂಕರ್ ಹಾಗೂ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಬ. ಸಂಗೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.