NEWSನಮ್ಮರಾಜ್ಯರಾಜಕೀಯ

ಇಂದಿರಾ ಕ್ಯಾಂಟೀನ್‌ ಉಚಿತ ಆಹಾರ ಇನ್ನಾರು ತಿಂಗಳು ಮುಂದುವರಿಸಿ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ಇಂದಿರಾ ಕ್ಯಾಂಟೀನ್‌ಗಳಲ್ಲಿ ಈಗ ನೀಡುತ್ತಿರುವ ಉಚಿತ ಆಹಾರವನ್ನು ಮುಂದಿನ ಆರು ತಿಂಗಳವರೆಗೆ ಮುಂದುವರಿಸಿಕೊಂಡು ಹೋಗಬೇಕು ಮತ್ತು ಹೆಚ್ಚಿನ ಬೇಡಿಕೆಯಿರುವ ಕಡೆ ಹೆಚ್ಚುವರಿ ಸಂಚಾರಿ ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಪೂರೈಕೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಂಯ್ಯ ಒತ್ತಾಯಿಸಿದ್ದಾರೆ.

ಸೋಮವಾರ ಕೊಪ್ಪಳದ ಇಂದಿರಾ ಕ್ಯಾಂಟೀನ್ ಗೆ ಭೇಟಿನೀಡಿದೆ ವೇಳೆ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾರ್ಡಿಗೊಂದರಂತೆ 198 ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳು ಸೇರಿದಂತೆ ಒಟ್ಟು 461 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿತ್ತು. ಈಗ ಅದು ಜನರ ಹಸುನೀಗಿಸಲು ಸಮರ್ಪಕವಾಗಿ ಸೇವೆ ಒದಗಿಸಬೇಕು ಎಂದರು.

ಈಗ ಲಾಕ್ ಡೌನ್ ತೆರವಾಗಿರುವ ಕಾರಣ ರಾಜ್ಯ ಸರ್ಕಾರ ಹಿಂದಿನಂತೆ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡದೆ, ಬೀಗ ಹಾಕಬೇಕಾದ ಸ್ಥಿತಿಗೆ ತಳ್ಳಲಿದೆ. ಈ ಬಗ್ಗೆ ಜನ ಜಾಗೃತರಾಗಬೇಕು. ಇಂಥದ್ದೊಂದು ಜನಪರವಾದ ಯೋಜನೆ ನಿಲ್ಲದಂತೆ ಜನರೇ ಸರ್ಕಾರದ ಕಿವಿಹಿಂಡುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕಳೆದೆರಡು ತಿಂಗಳುಗಳ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡಜನರ ಹಸಿವು ನೀಗಿಸಲು ನೆರವಾದದ್ದು ನಮ್ಮ ಸರ್ಕಾರದ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆ. ಲಾಕ್ ಡೌನ್ ಇರುವ ಕಾರಣ ಸರ್ಕಾರ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿತ್ತು.

ಆದರೆ ಈಗಿನ ಸರ್ಕಾರ ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಈ ಕ್ಯಾಂಟೀನ್ ಗಳಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರು ಇಡಲಾಗಿದೆ ಎಂಬ ಏಕೈಕ ಕಾರಣಕ್ಕೆ ಅನುದಾನ ಬಿಡುಗಡೆ ಮಾಡದೆ, ಮುಚ್ಚಲು ಹೊರಟಿತ್ತು ಎಂದು ಹೇಳಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು