NEWSನಮ್ಮರಾಜ್ಯಸಿನಿಪಥ

ನಾನು ಅಪ್ಪನಾಗುತ್ತಿರುವುದು ನಿಜ: ಸಂತಸ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅತಿ ಶೀಘ್ರದಲ್ಲಿ ನಾನು ತಂದೆ ಆಗುತ್ತಿದ್ದೇನೆ ಎಂದು ಜೆಡಿಎಸ್‌ ಯುವರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಸ ಹಂಚಿಕೊಂಡಿದ್ದಾರೆ.

ಸುದ್ದಿಗೋಷ್ಠಿ ವೇಳೆ ಸುದ್ದಿಗಾರರು ಕೇಳಿದಕ್ಕೆ ಪ್ರತಿಕ್ರಿಸಿದ ಅವರು, ಇದು ವೈಯಕ್ತಿಕ ವಿಚಾರ. ಕೆಲವೊಂದು ವೈಯಕ್ತಿಕ ವಿಚಾರವನ್ನು ನಾನು ಹೊರಗೆ ಹೇಳೋಕೆ ಇಷ್ಟ ಪಡುವುದಿಲ್ಲ. ಆದರೆ, ನಾವು ಸಾರ್ವಜನಿಕ ಬದುಕಲ್ಲಿ ಇದ್ದಮೇಲೆ ಕೆಲವೊಂದಷ್ಟು ವಿಚಾರಗಳು ಹರಿದು ಬರುತ್ತವೆ. ನೀವು ಕೇಳಿರುವ ವಿಚಾರ ನಿಜ ಎಂದು ಹೇಳಿದರು.

ಇನ್ನು ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿರಲಿಲ್ಲ. ಹೀಗಾಗಿ, ಈ ಸುದ್ದಿ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಸ್ಪಷ್ಟತೆ ಇರಲಿಲ್ಲ. ಈಗ ತಾವು ತಂದೆ ಆಗುತ್ತಿರುವುದು ಹೌದು ಎಂದು ಹೇಳಿದ್ದು, ಅಭಿಮಾನಿಗಳಲ್ಲಿ ಸ್ಪಷ್ಟತೆ ಸಿಕಂತ್ತಾಗಿದೆ.

ನಿಖಿಲ್ ಹಾಗೂ ರೇವತಿ ಕಳೆದ ವರ್ಷ ಅದ್ದೂರಿಯಾಗಿ ಮದುವೆ ಆಗಲು ನಿರ್ಧರಿಸಿದ್ದರು. ಮಂಡ್ಯದಲ್ಲಿ ಸಾವಿರಾರು ಜನರಿಗೆ ಊಟ ಹಾಕೋಕೆ ಸಿದ್ಧತೆ ನಡೆದಿತ್ತು. ಆದರೆ, ಆಗ ಕೊರೊನಾ ಸೋಂಕು ಹರಡುತ್ತಿದ್ದರಿಂದ ಮದುವೆ ಕುಟುಂಬದವರ ಸಮ್ಮುಖದಲ್ಲಿ ಸಿಂಪಲ್ ಆಗಿ ನಡೆದಿತ್ತು. ಈಗ ನಿಖಿಲ್ ತಂದೆ ಆಗುತ್ತಿರುವ ವಿಚಾರ ಅವರ ಅಭಿಮಾನಿ ಬಳಗಕ್ಕೆ ಖುಷಿ ನೀಡಿದೆ.

ಸದ್ಯ ನಿಖಿಲ್ ‘ರೈಡರ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ‘ಸೀತಾರಾಮ ಕಲ್ಯಾಣ’ ಚಿತ್ರದ ನಂತರ ಅವರ ನಟನೆಯ ಬೇರೆ ಯಾವುದೇ ಸಿನಿಮಾಗಳು ತೆರೆಕಂಡಿಲ್ಲ. ರೈಡರ್ ಸಿನಿಮಾದ ಶೂಟಿಂಗ್​ಗಾಗಿ ಕೆಲ ತಿಂಗಳ ಹಿಂದೆ ಲೇಹ್-ಲಡಾಕ್​ಗೆ ತೆರಳಿದ್ದರು. ಆಗ ಅವರು ಕೊವಿಡ್​ ಪರೀಕ್ಷೆಗೆ ಒಳಗಾಗಿದ್ದು ಕೊರೊನಾ ಪಾಸಿಟಿವ್ ಆಗಿತ್ತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ