ಬೆಂಗಳೂರು: ಅಸಂಖ್ಯಾತ ಯುವ ಅಭಿಮಾನಿಗಳಿಂದ “ವಕೀಲ್ ಸಾಬ್” ಎಂದೇ ಕರೆಸಿಕೊಳ್ಳುತ್ತಿರುವ ವಕೀಲ ಜಗದೀಶ್ ಕೆ.ಎನ್. ಮಹಾದೇವ್ ಆಮ್ ಆದ್ಮಿ ಪಾರ್ಟಿಯನ್ನು ಸೇರಲಿದ್ದಾರೆ.
ರಮೇಶ್ ಜಾರಕಿಹೊಳಿಯವರು ಯುವತಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಸಂತ್ರಸ್ತರ ಧ್ವನಿಯಾದ ಹೆಗ್ಗಳಿಕೆ ಇವರದ್ದು.
ಆಮ್ ಆದ್ಮಿ ಪಾರ್ಟಿಯ ಮೂಲಕ ಇವರು ಸಕ್ರಿಯ ರಾಜಕೀಯ ಪ್ರವೇಶಿಸುತ್ತಿರುವುದು ಸಮಾಜದ ಹಿತದೃಷ್ಟಿಯಿಂದ ಆಶಾದಾಯಕ ಬೆಳವಣಿಗೆಯಾಗಿದೆ.
ಅಕ್ಟೋಬರ್ 11, 2021ರ ಸೋಮವಾರದಂದು ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಜಗದೀಶ್ ಮಹಾದೇವ್ ಅವರನ್ನು ಆಮ್ ಆದ್ಮಿ ಪಾರ್ಟಿಗವಿದ್ಯುಕ್ತವಾಗಿ ಬರಮಾಡಿಕೊಳ್ಳಲಾಗುತ್ತಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದ್ದಾರೆ.