NEWSನಮ್ಮರಾಜ್ಯರಾಜಕೀಯ

ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ ಎಚ್‌ಡಿಕೆನೇ: ಎಚ್‌ಡಿಆರ್‌

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ. ನಮ್ಮಲ್ಲಿ ಕಚ್ಚಾಟವಿಲ್ಲ, ಎಲ್ಲವೂ ಸರಿಯಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಧಿಕಾರ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇವೆ, ಇಲ್ಲ ಸುಮ್ಮನ್ನಿರುತ್ತೇವೆ. ಈ ಹಿಂದೆ ಅಧಿಕಾರ ಕೊಟ್ಟಿದ್ದರು 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಾನು ಮುಖ್ಯಮಂತ್ರಿ ಎಂದು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ ಎಂದು ತಿಳಿಸಿದರು.

ಇನ್ನು ಸರ್ಕಾರಕ್ಕೆ ನಾಚಿಕೆಯಾಗಬೇಕು, ಇದನ್ನು ಸರ್ಕಾರ ಎನ್ನುತ್ತಾರಾ? ಸರ್ಕಾರ ಲೂಟಿಕೋರರ ಕೈಸೇರಿದೆ, ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಲೂಟಿ ನಡೆಯುತ್ತಿದೆ. ಮೋದಿಯವರೇ ಸರ್ಕಾರವನ್ನು ಲೂಟಿಕೋರರ ಕೈಗೆ ಕೊಟ್ಟಿದ್ದೀರಾ, ಕೇಂದ್ರ ಸರ್ಕಾರ ನೀಡುವ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಭ್ರಷ್ಟಾಚಾರ ಮುಕ್ತ ಮಾಡುತ್ತೇನೆ, ಅಚ್ಛೆ ದಿನ್ ಬರುತ್ತೆ ಎಂದು ಮೋದಿ ಜೀ ಹೇಳುತ್ತಿದ್ದಾರಾ. ಆದರೆ, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ತರಿಸಿಕೊಳ್ಳಿ. ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ. ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕೋವಿಡ್ ಹೆಸರಿನಲ್ಲಿ ಗ್ರಾಪಂ ಅನುದಾನವನ್ನು ಕಡಿತ ಮಾಡಿದ್ದಾರೆ, ಎಂಎಲ್‍ಎ ಅನುದಾನವನ್ನು ಕೊಟ್ಟಿಲ್ಲ. ಗ್ರಾಮ ಪಂಚಾಯಿತಿಯ ಹಕ್ಕನ್ನು ಕಸಿದುಕೊಳ್ಳಬೇಡಿ. ಸರ್ಕಾರ ಇದನ್ನು ಸರಿಪಡಿಸದಿದ್ದರೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಒಳಗೊಂಡಂತೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ನಂತರ ರಾಜ್ಯಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ