NEWSನಮ್ಮರಾಜ್ಯ

ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್‌, ಖಜಾಂಚಿ ಜಗದೀಶ್‌ ಉಚ್ಚಾಟನೆ

ಕೂಟಕ್ಕೆ ಧಕ್ಕೆ ತರುವಂತಹ ವಿರೋಧಿ ಚಟುವಟಿಕೆಯಲ್ಲಿ ಭಾಗಿ ಹಿನ್ನೆಲೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟಕ್ಕೆ ಧಕ್ಕೆ ತರುವಂತಹ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಕೂಟದ ಜಂಟಿ ಕಾರ್ಯದರ್ಶಿ ಆನಂದ್‌ ಮತ್ತು ಖಜಾಂಚಿ ಜಗದೀಶ್‌ ಅವರನ್ನು ಕೂಟದಿಂದ ಉಚ್ಛಾಟನೆ ಮಾಡಲಾಗಿದೆ.

ಇದೇ ಜೂನ್ 5ರಂದು ಕೂಟದಿಂದ ನಡೆಸಿದ ವಿಡಿಯೋ ಕಾನ್ಫರೆನ್ಸ್ ಕಾರ್ಯಕಾರಣಿ ಸಭೆಯಲ್ಲಿ ಕೂಟದ ಸರ್ವ ಸದಸ್ಯರು ಸರ್ವಾನುಮತದಿಂದ ನೀವು ಕೂಟದ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ತೆಗೆದುಕೊಂಡಿರುವ ನಿರ್ಣಯದಂತೆ ನಿಮ್ಮಿಬ್ಬರನ್ನು ನಿಮ್ಮ ಹುದ್ದೆಗಳಿಂದ ವಜಾ ಮಾಡಿದ್ದು ಮತ್ತು ಕೂಟದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.

ಕಳೆದ ತಿಂಗಳ ಮೇ 16 ರಂದು ತಮಗೆ 15 ದಿನಗಳೊಳಗೆ ಉತ್ತರ ನೀಡುವಂತೆ ಕಾರಣ ಕೇಳುವ ಸೂಚನಾ ಪತ್ರ ರವಾನೆ ಮಾಡಿದ್ದು ತಾವು ವ್ಯಾಟ್ಸಪ್ ಮೂಲಕ ಉತ್ತರ ನೀಡಿದ್ದು ತಾವು ನೀಡಿರುವ ಉತ್ತರ ಸಮಂಜಸವಾಗುವುದಿಲ್ಲ. ಹೀಗಾಗಿ ಜೂನ್ 5ರಂದು ನಡೆದ ವಿಡಿಯೋ ಕಾನ್ಫರೆನ್ಸ್ ಕಾರ್ಯಕಾರಣಿ ಸಭೆಯಲ್ಲಿ ಕೂಟದ ಸರ್ವ ಸದಸ್ಯರು ಸರ್ವಾನುಮತದಿಂದ ತಮ್ಮ ಸಂಘ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ತಮ್ಮನ್ನು ಕೂಟದ ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಯಿಂದ ವಜಾ ಮಾಡಿದ್ದು ಮತ್ತು ಕೂಟದಿಂದ ಉಚ್ಚಾಟನೆ ಮಾಡಲು ನಿರ್ಧಾರ ಮಾಡಿದೆ. ಅದರಂತೆ ಇನ್ನು ಮುಂದೆ ಕೂಟದ ಯಾವುದೇ ಕಾರ್ಯಚಟುವಟಿಕೆಗಳಲ್ಲಿ ತಾವು ಪಾಲ್ಗೊಳ್ಳುವಂತಿಲ್ಲ ಎಂದು ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.

ವಜಾ ವಿರೋಧಿಸಿ ಇಬ್ಬರು ನಾಜೀನಾಮೆ
ಸಂಘದ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್‌ ಮತ್ತು ಖಜಾಂಚಿ ಜಗದೀಶ್‌ ಅವರನ್ನು ಉಚ್ಛಾಟನೆ ಮಾಡಿದ್ದನ್ನು ವಿರೋಧಿಸಿ ಕೂಟದ ಪ್ರಚಾರ ಸಮಿತಿ ಕಾರ್ಯದರ್ಶಿಗಳಾದ ಚೇತನ್‌ ರಾಜ್‌ ಮತ್ತು ನಾಗೇಂದ್ರ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ.

ಕೂಟದ ಪ್ರಚಾರ ಸಮಿತಿ ಕಾರ್ಯದರ್ಶಿಗಳಾದ ಚೇತನ್‌ ರಾಜ್‌ ಮತ್ತು ನಾಗೇಂದ್ರ  ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿಯೂ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು