Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ರಾಜ್ಯ ರಾಜಕೀಯದಲ್ಲಿ ಕೆಜೆಪಿ ಮತ್ತೆ ಉದಯಿಸಲಿದೆ : ಹೊಸ ಬಾಂಬ್ ಸಿಡಿಸಿದ ಕಿಮ್ಮನೆ ರತ್ನಾಕರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ರಾಜ್ಯದ ರಾಜಕೀಯದಲ್ಲಿ ಕೆಜೆಪಿ (ಕರ್ನಾಟಕ ಜನತಾ ಪಾರ್ಟಿ) ಮತ್ತೆ ಉದಯಿಸಲಿದೆ. ಜೆಡಿಎಸ್ ಆ ಪಕ್ಷದ ಜತೆ ಕೈಜೋಡಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೊಸ ಬಾಂಬ್ ಸಿಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಪಕ್ಷದಮುಖಂಡರ ಸಭೆಯಲ್ಲಿ ಮಾತನಾಡಿದರು.

ಸದ್ಯದಲ್ಲೇ ಕೆಜೆಪಿ ಪುನರ್ ಸ್ಥಾಪನೆಯಾಗಲಿದೆ. ಜೆಡಿಎಸ್ ಸಹಯೋಗದಲ್ಲಿ ಸರ್ಕಾರ ರಚಿಸಲು ಸಿದ್ಧ ತೆ ನಡೆದಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಈಚೆಗೆ ಕಾಂಗ್ರೆಸ್ ಸೇರಿದ ರಾಜಕೀಯ ಅಲೆಮಾರಿಗಳು (ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಣ) ಕೆಜೆಪಿ ಸೇರಲಿದ್ದಾರೆ ಎಂದು ಚರ್ಚೆಗೆ ನಾಂದಿ ಹಾಡಿದರು.

ತೀರ್ಥಹಳ್ಳಿ ತಾಲೂಕಿನಲ್ಲಿ ಕಾಂಗ್ರೆಸ್‌ ಮುಖಂಡರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜೆಡಿಎಸ್ ಮುಖಂಡರು ಕಾಣಿಸಿಕೊಳ್ಳುತ್ತಿದ್ದಾರೆ. ಈಚೆಗೆ ನಡೆದ ಶರಾವತಿಮುಳುಗಡೆ ಸಂತ್ರಸ್ತರ ಪಾದಯಾತ್ರೆಯಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ.ಶ್ರೀ ಕಾಂತ್ ಭಾಗಿಯಾಗಿದ್ದರು.

ಬಿದರಗೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವೇಗೌಡರು, ಕುಮಾರಸ್ವಾಮಿ ಭಾವಚಿತ್ರ ಬಳಸಲಾಗಿತ್ತು. ಪಕ್ಷದ ಅಭ್ಯ ರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಬೇರೆ ಪಕ್ಷದವರಿಗೆ ಮಣೆ ಹಾಕುವುದರ ಹಿಂದಿನ ಮರ್ಮವೇನು? ನಾನೂಸಭೆ ಆಯೋಜಿಸಿ, ಬೇರೆ ಪಕ್ಷದಮುಖಂಡರನ್ನು ಆಹ್ವಾ ನಸಿದರೆ ಸಹಿಸುವಿರಾ ಎಂದು ಪ್ರಶ್ನಿಸಿದರು.

ಕಿಮ್ಮನೆ ಮಾತಿಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಮಾತಿನಚಕಮಿ ನಡೆಯಿತು. ‘ಯಾರನ್ನೋ ಕರೆತಂದು ನನ್ನ ನ್ನು ರಾಜಕೀಯವಾಗಿಮುಗಿಸಲು ಸಾಧ್ಯವಿಲ್ಲ ಎನ್ನುತ್ತಾ ಕಿಮ್ಮನೆ ಮಧ್ಯದಲ್ಲೇ ಸಭೆಯಿಂದ ಹೊರನಡೆದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ