NEWSನಮ್ಮರಾಜ್ಯರಾಜಕೀಯ

ಕೆಪಿಸಿಸಿ ಭ್ರಷ್ಟಾಧ್ಯಕ್ಷ, ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರದ ಚಿತ್ರೀಕರಣ ಆರಂಭ : ಬಿಜೆಪಿ ಲೇವಡಿ

ಡಿಕೆಶಿ ಕುಡುಕ, ಕಲೆಕ್ಷನ್ ಗಿರಾಕಿ ಎಂದಿರುವ ಕಾಂಗ್ರೆಸ್ ವಿಡಿಯೋ ವೈರಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಡುಕ, ದೊಡ್ಡಸ್ಕ್ಯಾಮ್, ಕಲೆಕ್ಷನ್ ಗಿರಾಕಿ ಎಂದು ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು , ಬಿಜೆಪಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡುತ್ತಿರುವ ವಿಡಿಯೋ ಲಗತ್ತಿಸಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ‘ಕೈ’ ನಾಯಕರ ವಿರುದ್ಧ ಹರಿಹಾಯ್ದಿದೆ.

ಕೆಪಿಸಿಸಿ ಕಚೇರಿಯಲ್ಲೇ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಭ್ರಷ್ಟಾ ಚಾರವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಪದಾಧಿಕಾರಿಗಳು ತೆರೆದಿಟ್ಟಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಪಕ್ಷ ತವರು ಮನೆಯಾಗಿದೆ ಎಂದು ಟ್ವೀಟ್‌ನಲ್ಲಿ ಬಿಜೆಪಿ ಉಲ್ಲೇ ಖಿಸಿದೆ.

ಶಿವಕುಮಾರ್ ಅವರೇ, ಸೀಸರ್‌ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ. ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ , ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಧಿಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇಬೇಕಲ್ಲವೇ ಎಂದು ಪ್ರಶ್ನಿಸಿದೆ.

ಡಿ.ಕೆ.ಶಿವಕುಮಾರ್ ಅವರ ಮೇಲೆ ನಡೆದ ಐ.ಟಿ, ಇ.ಡಿ ದಾಳಿ ರಾಜಕೀಯ ಪ್ರೇ ರಿತ ಎನ್ನುವ ಕಾಂಗ್ರೆ ಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗಯಾವುದೆಂದು ನಾಯಕ ಉಗ್ರಪ್ಪ ಹಾಗೂ ಸಲೀಂ ಅವರು ಸ್ಪಷ್ಟ ಪಡಿಸಿದ್ದಾರೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ ಎಂದು ಬಿಜೆಪಿ ಪ್ರಶ್ನಿಸಿದೆ.

ಮುಖ್ಯಮಂತ್ರಿಯಾಗುವ ಡಿಕೆಶಿ ಕನಸಿಗೆ ಕಾಂಗ್ರೆಸ್ ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ವಪಕ್ಷೀ ಯರೇ ಷರಾ ಬರೆದುಬಿಟ್ಟಿದ್ದಾರೆ. ಈಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ ‘ಡಿಕೆಶಿ ಪದಚ್ಯುತಿ’ ಎಂಬ ಮಾಸ್ಟರ್ ಪ್ಲ್ಯಾನ್ನ ಭಾಗವೇ? ಡಿಕೆಶಿ ಅವರೇ,

ನಿಮ್ಮ ಹುಡುಗರ ಬಳಿ 50ರಿಂದ 100 ಕೋಟಿ ರೂ.ಗಳು ಇದೆಯಂತೆ, ಹಾಗಾದರೆ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಬಳಿ ಎಷ್ಟಿರಬಹುದು? ಇದು ಕೆಪಿಸಿಸಿ ಕಚೇರಿಯಿಂದಲೇ ಎದ್ದಿರುವ ಅಧಿಕೃತ ಅನುಮಾನ. ಈ ಪ್ರಶ್ನೆ ರಾಜ್ಯದ ಜನತೆಯನ್ನೂ ಕಾಡುತ್ತಿದೆ. ಇದಕ್ಕೆ ನೀವಲ್ಲದೆ ಇನ್ಯಾರು ಉತ್ತರಿಸುತ್ತಾರೆ ಎಂದು ಟ್ವೀಟ್‌ನಲ್ಲಿ ಬಿಜೆಪಿ ಉಲ್ಲೇ ಖಿಸಿದೆ.

ಪ್ರತಿ ಬಾರಿ ದೆಹಲಿ ಭೇಟಿಯ ಬಳಿಕ ಡಿಕೆಶಿ ಅವರ ಪದಚ್ಯು ತಿಗೆ ಸಿದ್ದರಾಮಯ್ಯ ತಂತ್ರ ಹೆಣೆಯುತ್ತಾರೆ. ತಂತ್ರದ ಭಾಗವಾಗಿ ಇಂದಿನ ಪ್ರಹಸನ ಬಿಡುಗಡೆಯಾಗಿದೆ. ಡಿಕೆಶಿ ಅವರ ಬಗ್ಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಸತ್ಯ ಬಿಚ್ಚಿಟ್ಟವರು ಸಿದ್ದರಾಮಯ್ಯ ಅವರ ಶಿಷ್ಯರು!’ ಎಂದು ಬಿಜೆಪಿ ಟೀಕಿಸಿದೆ.

ಡಿಕೆಶಿ ಅವರೇ, ನೀವು ಕುಡುಕರೇ, ನೀವು ಭ್ರಷ್ಟರೇ? ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನಗಳನ್ನು ಬಗೆಹರಿಸಿ ಎಂದು ಬಿಜೆಪಿ ಆಗ್ರಹಿಸಿದೆ. ಜತೆಗೆ, ಸಿದ್ದರಾಮಯ್ಯ ಖಡಕ್, ಶಿವಕುಮಾರ್ ಕುಡುಕ, ಕಳ್ಳರು ಕಳ್ಳರು ಸೇರಿ ಸಂತೆಗೆ ಹೊರಟಂತಾಗಿದೆ ಎಂದು ವ್ಯಂಗ್ಯವಾಡಿದೆ.

ಭ್ರಷ್ಟಾಧ್ಯಕ್ಷ, ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರದ ಚಿತ್ರೀ ಕರಣ ಆರಂಭಗೊಂಡಿದೆ. ನಿರ್ಮಾಣ, ನಿರ್ದೇಶನ ಸಿದ್ದರಾಮಯ್ಯ ಅವರದ್ದು. ತಾರಾಗಣ ಉಗ್ರಪ್ಪ, ಸಲೀಂ. ಅಕ್ರಮ ಸಂಪಾದನೆಯ ಅಸಲಿ ಕಥೆಯ ಟ್ರೈಲರ್ ಕೆಪಿಸಿಸಿ ಕಚೇರಿಯಿಂದಲೇ ಬಿಡುಗಡೆಯಾಗಿದೆ. ಭ್ರಷ್ಟಾಧ್ಯಕ್ಷರೇ, ನಿಮ್ಮ ಥಿಯೇಟರ್ನಲ್ಲೇ ಸಿನಿಮಾ ಬಿಡುಗಡೆಯಾಗಲಿದೆಯೇ?’ ಎಂದು ಬಿಜೆಪಿ ಲೇವಡಿಮಾಡಿದೆ.

ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಹಾಗೂ ಸಲೀಂ ಅವರು ತಮ್ಮ ಅಧ್ಯಕ್ಷರ ಮೇಲೆ ಭ್ರಷ್ಟಾಚಾರ ಹಾಗೂ ವಿಫಲ ನಾಯಕತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಪ ಸಂಖ್ಯಾತರಾದ ಸಲೀಂ ಅವರನ್ನು ಪಕ್ಷವು ಅಮಾನತು ಮಾಡಿದೆ. ಆದರೆ ಉಗ್ರಪ್ಪ ಅವರಿಗೆ ರಾಜಮರ್ಯಾದೆ ನೀಡಿದೆ. ಸಿಎಂ ಇಬ್ರಾಹಿಂ ಹೇಳಿದಮಾತುಗಳನ್ನು ಕರ್ನಾಟಕ ಕಾಂಗ್ರೆಸ್ ನಿಜಮಾಡಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ವ್ಯಂಗ್ಯವಾಡಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ