NEWSನಮ್ಮರಾಜ್ಯರಾಜಕೀಯ

ಸಿ.ಟಿ.ರವಿ ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ತಲೆಮರೆಸಿಕೊಂಡಿದ್ದ ಒಬ್ಬ ಕೊಲೆಗಡುಕ: ಲಕ್ಷ್ಮಣ್‌ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಿ.ಟಿ.ರವಿ ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ಮದ್ರಾಸ್‌ನಲ್ಲಿ ತಲೆಮರೆಸಿಕೊಂಡಿದ್ದ ಒಬ್ಬ ಕೊಲೆಗಡುಕ. ಇಂತಹವರು ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಮೋಸ ಮಾಡುತ್ತಿದೆ. ಬಿಜೆಪಿ ನಾಯಕ ಸಿ.ಟಿ.ರವಿಗೆ ನಾಚಿಕೆಯಾಗಬೇಕು. ಮೇಕೆದಾಟು ವಿಚಾರದಲ್ಲಿ ಬಿಜೆಪಿಯವರದ್ದು ದ್ವಂದ್ವ ನಿಲುವು. ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ತಮಿಳುನಾಡಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈಶ್ವರಪ್ಪ ಬಿಜೆಪಿ ಮೇಲಿರುವ ಕೋಪವನ್ನು ಕಾಂಗ್ರೆಸ್ ಮೇಲೆ ತೋರಿಸುತ್ತಿದ್ದಾರೆ. ಇವರಿಗೇನಾದರೂ ಸಂಸ್ಕೃತಿ, ಕಾಮನ್ಸೆಸ್ಸ್ ಇದೆಯಾ? ಈಶ್ವರಪ್ಪನವರಿಗೆ ಮಾನ ಮರ್ಯಾದೆ ಇದೆಯಾ ಎಂಬುದನ್ನು ಮೊದಲು ತಿಳಿಸಿ.

ನಿಮ್ಮ ಮಗ ಕಾಂತೇಶ್ ಬೆಂಗಳೂರಿನ ಪೀಣ್ಯದಲ್ಲಿ ಸೈಟ್ ಖರೀದಿಸಿದ್ದಾರೆ. 4 ಇಂಡಸ್ಟ್ರಿಯಲ್ ಸೈಟು ಖರೀದಿಸಿದ್ದೀರಿ, ಅದರಲ್ಲಿ ಏನು ಮಾಡ್ತಿದ್ದೀರಿ? ಒಬ್ಬರಿಗೆ ನಾಲ್ಕು ಸೈಟ್ ಹೇಗೆ ನೀಡ್ತಾರೆ? ಇದರ ಒಟ್ಟು ಬೆಲೆ ಎಷ್ಟು? ಇಡಿ, ಐಟಿ ಯಾಕೆ ಇವರ ಬಗ್ಗೆ ತನಿಖೆ ಮಾಡುತ್ತಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆ ಮಾತ್ರಾ ರೈಡ್ ಮಾಡೋದಾ ಎಂದು ಪ್ರಶ್ನಿಸಿದರು.

ಈಶ್ವರಪ್ಪ ಸರ್ಕಾರದ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಿಮ್ಮ ಮಗ ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ನನ್ನ ಬಳಿ ಸಂಪೂರ್ಣ ದಾಖಲಾತಿ ಇದೆ. ಹೀಗಾಗಿ ಈ ಬಗ್ಗೆ ಇಡಿ ಹಾಗೂ ಐಟಿಗೆ ದೂರು ನೀಡುತ್ತಿದ್ದೇವೆ. ಯಾವ ರೀತಿ ತನಿಖೆ ಮಾಡುತ್ತಾರೋ ನೋಡುತ್ತೇವೆ. ಈಶ್ವರಪ್ಪ ಮೊದಲು ಹುಚ್ಚರ ರೀತಿ ಮಾತನಾಡುವುದನ್ನು ಬಿಡಲಿ ಎಂದು ಹೇಳಿದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ