Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ: ಕಾರ್ಯಕರ್ತರಿಗೆ ಮಾಜಿ ಸಿಎಂ ಎಚ್‌ಡಿಕೆ ಕಿವಿಮಾತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 3-4 ದಿನಗಳಿಂದ ತಾರಕಕ್ಕೇರಿರುವ ಸಂಸದೆ ಸುಮಲತಾ ಮತ್ತು ಕುಮಾರಸ್ವಾಮಿ ಅವರ ನಡುವಿನ ವಾಕ್‌ ಸಮರದಲ್ಲಿ ಮಾಧ್ಯಮಗಳು ಒಂದು ರೀತಿ ಒಂದು ಸೈಡ್‌ ವೈಭವೀಕರಿಸುತ್ತಿದ್ದು, ಸತ್ಯ ಮರೆಮಾಚುವಂತ ಕೆಲಸದಲ್ಲಿ ತೊಡಗಿವೆ. ಇದು ಜನಸಾಮಾರ್ಯಗೆ ಅರ್ಥವಾಗದ ವಿಷಯವೇನಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಈ ವಿಷಯಕ್ಕೆ ಪೂರ್ಣ ವಿರಾಮ ಹಾಕಲು ಮುಂದಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅದಕ್ಕೆ ಸರಣಿ ಟ್ವೀಟ್‌ ಮಾಡಿ, ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ ಇನ್ನು ಇಂಥ ವಿಷಯಗಳಿಗೆ ನಾವು ಕಿವಿಯಾಗಬಾರದು ಎಂದು ಸಲಹೆ ನೀಡಿದ್ದಾರೆ.

ಇನ್ನು ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ಹೇಳಿದ್ದಾರೆ.

ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ ಎಂದು ತಿಳಿಸಿದ್ದಾರೆ.

ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ