ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಗ್ಗುತ್ತಿರುವುದರಿಂದ ಜೂನ್ 21ರ ನಂತರ ಲಾಕ್ಡೌನ್ ಅನ್ನು ಮತ್ತಷ್ಟು ಸಡಿಲ ಮಾಡುವತ್ತ ಸರ್ಕಾರ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ಮುಂದೆ ಮೂರನೇ ಅಲೆ ಸಂಭವಿಸಲಿದೆ. ಆ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುತ್ತ ಚರ್ಚೆ ನಡೆಯುತ್ತಿದ್ದು, ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ.
ಈ ಎಲ್ಲರದ ನಡುವೆಯೂ ಜೂ. 21ರ ನಂತರ ಲಾಕ್ಡೌನ್ನಲ್ಲಿ ಮತ್ತಷ್ಟು ಸಡಿಲಿಕೆ ಮಾಡಬೇಕಾಗಿದ್ದು, ಈ ಸಂಬಂಧ ನಾಳೆ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.