NEWSನಮ್ಮರಾಜ್ಯ

ಕಷ್ಟಕಾಲದಲ್ಲೂ ವೃತ್ತಿಪರತೆ ಎತ್ತಿಹಿಡಿದ ಪತ್ರಕರ್ತರಿಗೆ ಕೋಟಿ ಕೋಟಿ ನಮನಗಳು: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು.ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ” ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಂತಹ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು. ಜನರಲ್ಲಿ ತಾವು ಮೂಡಿಸಿದ ಜಾಗೃತಿ, ಅರಿವಿನ ಪರಿಣಾಮ ರಾಜ್ಯದಲ್ಲಿ ಇಂದು ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು ಕರ್ನಾಟಕ ” ಕೊರೊನಾ ಮುಕ್ತ ” ದತ್ತ ದಾಪುಗಾಲುಟ್ಟಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸಹಜ ಸ್ಥಿತಿಗೆ ಬರುತ್ತಿರುವುದರಲ್ಲಿ ಮಾಧ್ಯಮ ಮತ್ತು ಪತ್ರಕರ್ತರ ಅಸಾಧಾರಣ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ತಮಾನದ ದಿನಗಳಲ್ಲಿ ಸತ್ಯಶೋಧಿಸುವ, ಧೈರ್ಯದಿಂದ ಅಭಿವ್ಯಕ್ತಿಸುವ ಮಾಧ್ಯಮದ ಶಕ್ತಿ ಪ್ರಜ್ವಲವಾಗಿ ಬೆಳಗಲಿ. ನನ್ನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ ಎಚ್‌ಡಿಕೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ