CrimeNEWSನಮ್ಮರಾಜ್ಯ

ಮಂಗಳೂರು ಕೆಎಸ್‌ಆರ್‌ಟಿಸಿ ಡಿಸಿ, ಡಿಟಿಒ ಕಿರುಕುಳಕ್ಕೆ ನೊಂದ ಸಾರಿಗೆ ನೌಕರ ನಿಂಗಪ್ಪ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಅಧಿಕಾರಿಗಳ ಕಿರುಕುಳದಿಂದ ಬೇಸತ್ತ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ 3ನೇ ಘಟಕದ ಚಾಲಕ ಕಂ ನಿರ್ವಾಹಕ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕೆಎಸ್‌ಆರ್‌ಟಿಸಿ ನೌಕರ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮವಡಗಿ ಗ್ರಾಮದ ನಿಂಗಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಮಂಗಳೂರಿನ ಕುಂಟಿಕಾನ ಬಳಿಯ ಬಾಡಿಗೆ ‌ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಆತ್ಮಹತ್ಯೆಗೆ ಮೇಲಧಿಕಾರಿಗಳ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ಬಸ್ ತೆಗೆಯುವ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದ್ದರು ಎಂಬ ಆರೋಪ ಹೊರಿಸಿ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿತ್ತು. ಬಳಿಕ ಅವರಿಗೆ ಡ್ಯೂಟಿ ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದರು. ಜತೆಗೆ ನಿಂದಿಸುತ್ತಿದ್ದರು. ಒಂದು ಕಡೆ ದೂರದ ಊರಿನಲ್ಲಿ ಕುಟುಂಬ ಇನ್ನೊಂದುಕಡೆ ಅಧಿಕಾರಿಗಳ ಕಿರುಕುಳ ಈ ಎಲ್ಲದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಂಗಪ್ಪ ಅವರ ಆತ್ಮಹತ್ಯೆಗೆ ಕೆಸ್ಸಾರ್ಟಿಸಿ  ಡಿಟಿಒ ಕಮಲಾಕರ್ ಹಾಗೂ ಕೆಸ್ಸಾರ್ಟಿಸಿ ಡಿಸಿ ಅರುಣ್ ಕುಮಾರ್, ಟಿಸಿ ನಂದಕುಮಾರ್ ಸೇರಿ 8ಮಂದಿ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಾರಿಗೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನಮಗೆ ನ್ಯಾಯ ಕೊಡಿಸಿ ಎಂದು ಉರ್ವಾ ಪೊಲೀಸ್ ಠಾಣೆ ಎದುರು ಶವವಿಟ್ಟು ಮೃತ ನಿಂಗಪ್ಪನ ಕುಟುಂಬದವರು ಅಳಲು ತೋಡಿಕೊಂಡಿದ್ದಾರೆ.

ಇತ್ತ ಮನೆಗೆ ಆಧಾರ ಸ್ಥಂಭವಾಗಿದ್ದ ಪತಿಯನ್ನು ಕಳೆದುಕೊಂಡ ಪತ್ನಿ ಮತ್ತು ಅಪ್ಪನನ್ನು ಕಳೆದುಕೊಂಡ ಇಬ್ಬರು ಮಕ್ಕಳು ಮತ್ತು ಕುಟುಂಬದವರ ಆಕ್ರಂದನ ಮುಗಿಲುಮುಟ್ಟುವಂತಿತ್ತು.

ಈ ನೊಂದ ಕಾರ್ಮಿಕನ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳನ್ನು ಕಾನೂನಿನಡಿ ತಕ್ಕ ಶಿಕ್ಷೆಗೆ ಒಳಪಡಿಸಲು ಸಾರಿಗೆ ಸಚಿವರು ಮುಂದಾಗಬೇಕು. ಜತೆಗೆ ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳು ಯಾರ ಮರ್ಜಿಗೂ ಒಳಗಾಗದೇ ನೊ೦ದ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಸಾರಿಗೆ ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ