NEWSನಮ್ಮರಾಜ್ಯ

ಮಂಗಳೂರು ಕೆಎಸ್‌ಆರ್‌ಟಿಸಿ ಡಿಸಿ ಅರುಣ್ ಕುಮಾರ್ ಕಿರುಕುಳದಿಂದ ಅಘಾತಕ್ಕೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಡಿಸಿ ಅರುಣ್ ಕುಮಾರ್ ಕಿರುಕುಳಕ್ಕೆ ಸಿಲುಕಿ ಅಘಾತಕ್ಕೊಳಗಾದ ಕುಂದಾಪುರ ಘಟಕದ ಅಕೌಂಟ್ಸ್‌ ಮೇಲ್ವಿಚಾರಕಿ (Accounts Supervisor) ಒಬ್ಬರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕೆಎಸ್‌ಆರ್‌ಟಿಸಿ ಕುಂದಾಪುರ ಘಟಕದ ಅಕೌಂಟ್‌ ಮೇಲ್ವಿಚಾರಕರಾದ ಶಾಂತಮ್ಮ ಎಂಬುವರೆ ಡಿಸಿ ಅರುಣ್ ಕುಮಾರ್ ಕಿರುಕುಳದಿಂದ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಸೇರಿರುವವರು.

ಕಳೆದ ಸೆ.27ರಂದು ಮಂಗಳೂರಿನ ಕುಂಟಿಕಾನ ಬಳಿಯ ಬಾಡಿಗೆ ‌ಮನೆಯಲ್ಲಿ ಇದೇ ಡಿಸಿ ಅರುಣ್ ಕುಮಾರ್ ಕಿರುಕುಳಕ್ಕೆ ಬೇಸತ್ತ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗ 3ನೇ ಘಟಕದ ಚಾಲಕ ಕಂ ನಿರ್ವಾಹಕ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು.

ಅರುಣ್ ಕುಮಾರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಆದರೆ ಈವರೆಗೂ ಇಲಾಖೆ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಕಾರಣ ಅರುಣ್ ಕುಮಾರ್ ರಾಜಕೀಯ ವ್ಯಕ್ತಿಗಳ ಪ್ರಭಾವ ಬಳಸಿಕೊಂಡು ಉನ್ನತ ಅಧಿಕಾರಿಗಳ ವಿರುದ್ಧವೇ ಕ್ರಮ ತೆಗೆದುಕೊಳ್ಳುವ ಬಗ್ಗೆ ಮೇಲಧಿಕಾರಿಗಳ ಬಾಯನ್ನೇ ಮುಚ್ಚಿಸುತ್ತಾನೆ ಎಂದು ಆರೋಪವೂ ಕೇಳಿ ಬಂದಿದೆ.

ಅರುಣ್ ಕುಮಾರ್‌ಗೆ ಮಂಗಳೂರು ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರ ಕೃಪಾಶೀರ್ವಾದ ಇರುವುದರಿಂದ ಈತ ಸಂಸ್ಥೆಯ ಕೆಳ ಹಂತದ ಅಧಿಕಾರಿಗಳನ್ನು ಹುರಿದು ಮುಕ್ಕುತ್ತಿದ್ದಾನೆ ಎಂಬ ಆರೋಪವಿದೆ. ಇನ್ನು ಚಾಲಕ ನಿಂಗಪ್ಪ ಅವರ ಆತ್ಮಹತ್ಯೆ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂಬ ಆರೋಪವು ಇದೆ.

ಈ ಎಲ್ಲ ಘಟನೆಗಳ ನಡುವೆಯೇ ಮತ್ತೆ ಕುಂದಾಪುರ ಘಟಕಕ್ಕೆ ಹೋಗಿ ಮಹಿಳಾ ಅಧಿಕಾರಿ ಸೇರಿದಂತೆ ಘಟಕದ ಹಲವು ಸಿಬ್ಬಂದಿಗಳನ್ನು ಅವಾಚ್ಯವಾಗಿ ನಿಂದಿಸಿದ್ದು, ಅಮಾನತು, ವಜಾ ಮಾಡುತ್ತೇನೆ ಎಂಬ ಬೆದರಿಕೆ ಹಾಕುವ ಮೂಲಕ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾನೆ ಈ ಅಧಿಕಾರಿ.

ಈತನ ವಿರುದ್ಧ ಈಗಾಗಲೇ ಕೆಎಸ್‌ಆರ್‌ಟಿಸಿ ಸಂಸ್ಥೆಯ ಕೇಂದ್ರ ಸ್ಥಾನಕ್ಕೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಅಂದರೆ ಈತ ದರ್ಪ ಮೆರೆಯುತ್ತಿದ್ದು, ಅಧಿಕಾರಿಗಳು ಕಾನೂನಿನಡಿ ಈತನನ್ನು ಶಿಕ್ಷಿಸಲಾರದಷ್ಟು ಅಸಹಾಯಕರಾಗಿದ್ದರಾ ಎಂಬ ಪ್ರಶ್ನೆ ಮೂಡುತ್ತಿದೆ.

ಇನ್ನು ಈ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕೂಡಲೆ ಅಮಾನತು ಮಾಡಬೇಕು ಎಂಬ ಕೂಗು ಸಿಬ್ಬಂದಿ ವರ್ಗದಿಂದ ವ್ಯಾಪಕವಾಗಿ ಕೇಳಿ ಬರುತ್ತಿದೆ. ಇನ್ನು ಈತನ ವಿರುದ್ಧ ಯಾವುದೇ ಕ್ರಮ ಜರುಗಿಸದಿದ್ದರೆ, ಇನ್ನೆಷ್ಟು ಸಿಬ್ಬಂದಿಗಳು ಜೀವ ಕಳೆದುಕೊಳ್ಳುವರೋ ಗೊತ್ತಿಲ್ಲ. ಹೀಗಾಗಿ ಸಿಬ್ಬಂದಿಗಳ ಜೀವ ಉಳಿಸಲಿಕ್ಕಾದರೂ ಈತನ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಸಂಸ್ಥೆಯ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಸೆ.27ರಂದು ಚಾಲಕ ಕಂ ನಿರ್ವಾಹಕ ನಿಂಗಪ್ಪ ಆತ್ಮಹತ್ಯೆ ಆತ್ಕಹತ್ಯೆ ಮಾಡಿಕೊಂಡರುವ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಬೇಕಿತ್ತು. ಆದರೆ ಇಷ್ಟು ದಿನಗಳು ಕಳೆದರೂ ಆರೋಪಿಗಳು ಕರ್ತವ್ಯದ ಮೇಲೆ ಇದ್ದು, ಕೆಳಹಂತದ ಅಧಿಕಾರಿಗಳಿಗೂ ಕಿರುಕುಳ ನೀಡುತ್ತಿದ್ದಾರೆ.

ಇಷ್ಟಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇತ್ತ ಇಲಾಖೆಯೂ ಪ್ರಕರಣ ಸಂಬಂಧ ಆರೋಪಿ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಂತೆ ಕಾಣಿಸುತ್ತಿಲ್ಲ.

ಇನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿ ಈಗಾಗಲೇ ಉರ್ವಾ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣ ಜಾಮೀನಿಗೆ ಸೆ.28ರಂದೇ ( 866/2021) ಅರ್ಜಿ ಹಾಕಿದ್ದಾರೆ. ಆದರೆ, ನ್ಯಾಯಾಲಯ ಅವರ ಅರ್ಜಿ ವಿಚಾರಣೆಯನ್ನು ಆಕ್ಟೋಬರ್‌ 7ಕ್ಕೆ ಮುಂದೂಡಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿ ಈಗಾಗಲೇ ಉರ್ವಾ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಬೇಕಿದ್ದ ಪೊಲೀಸರು ಕೈಕಟ್ಟಿ ಕುಳಿತಿರುವುದು ಏತಕ್ಕೆ ಎಂಬ ಅನುಮಾನ ಮೂಡುತ್ತಿದೆ. ಇನ್ನು ಆರೋಪಿಗಳು ತಪ್ಪಿಕೊಂಡಿದ್ದಾರೆ ಎನ್ನುವಂತಿಲ್ಲ. ಕಾರಣ ಆ ರೋಪಿಗಳು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಹೀಗೆ ಈ ಅಧಿಕಾರಿ ಅದೇ ವಿಭಾಗದಲ್ಲಿ ಕರ್ತವ್ಯ ಮುಂದುವರಿದರೆ ಪ್ರಕರಣ ಸಂಬಂಧ ಸಾಕ್ಷ್ಯಗಳನ್ನು ನಾಶಪಡಿಸುವ ಮತ್ತು ಸಾಕ್ಷಿಗಳನ್ನು ಎದುರಿಸುವ ಕೆಲಸ ಮಾಡಬಹುದು. ಆದ್ದರಿಂದ ಈ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು. ಜತೆಗೆ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕು. ಇಲ್ಲ ಮುಂದಿನ ದಿನಗಳಲ್ಲಿ ನಾವೇ ನ್ಯಾಯಾಲಯದಲ್ಲಿ ಪಿಸಿಆರ್‌ ದಾಖಲಿಸುವ ಜತೆಗೆ ಗೃಹ ಇಲಾಖೆಗೂ ಮನವಿ ಸಲ್ಲಿಸುತ್ತೇವೆ.

l ಶಿವರಾಜು, ವಕೀಲರು , ಸುಪ್ರೀಂಕೋರ್ಟ್‌ ಹಾಗೂ ಹೈ ಕೋರ್ಟ್‌

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ