NEWSನಮ್ಮರಾಜ್ಯ

ವಾಯುವಿಹಾರದ ವೇಳೆ ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ನೌಕರರ ಸಮಸ್ಯೆ ಆಲಿಸಿದ ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಯಚೂರು:  ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮಲು ಎರಡು ದಿನದ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಂದು ಸಿಂಧನೂರಿನಲ್ಲಿ ಬೆಳಗಿನ ವಾಯು ವಿಹಾರಕ್ಕೆ ತೆರಳಿದ ವೇಳೆ ರಸ್ತೆ ಮಾರ್ಗದಲ್ಲಿ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರನ್ನು ಮಾತನಾಡಿಸಿದರು.

ನಂತರ ಅವರ ಅಹವಾಲನ್ನು ಆಲಿಸುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಸಚಿವರು ಬಸ್‌ ಬಳಿ ಬಂದು ಮಾತನಾಡಿಸುತ್ತಿದ್ದಂತೆ ಸಂತಸಗೊಂಡ ಚಾಲಕ ಮತ್ತು ನಿರ್ವಾಹಕರು ನಮ್ಮ ಸಮಸ್ಯೆಗೆ ಸ್ಪಂದಿಸಿ ಸ್ವಾಮಿ ಎಂದು ಕೈ ಮುಗಿದು ಮನವಿ ಮಾಡಿದರು.

ಸಾರಿಗೆ ನೌಕರರ ಕಷ್ಟವನ್ನು ಅತೀ ಶೀಘ್ರದಲ್ಲೇ ಸಾಧ್ಯವಾದಷ್ಟು ಪರಿಹರಿಸುತ್ತೇನೆ ನೀವು ಯಾವುದೆ ಆತಂಕ ಪಡಬೇಡಿ ಎಂದು ಭರವಸೆ ನೀಡಿದರು.

ಅ.7ರಂದೇ ಸಿಂಧನೂರಿಗೆ ಆಗಮಿಸಿದ ಸಚಿವರು ಅಲ್ಲೇ ವಾಸ್ತವ್ಯ ಹೂಡಿದ್ದರು. ಅ.8ರ ಬೆಳಗ್ಗೆ 10ಗಂಟೆಗೆ ಸಿಂಧನೂರಿನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ. ನಡೆಸಿದರು.

11.30ಕ್ಕೆ ಮಸ್ಕಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ ಮಾಡುವರು.

ಮಧ್ಯಾಹ್ನ 12.45ಕ್ಕೆ ನದಲಕಲ್ಲು, ಕವಿತಾಳ ಮೊರಾರ್ಜಿ ದೇಸಾಯಿ, ಸಿರವಾರ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಮಲ್ಲಟದಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಗಳ ಲೋಕಾರ್ಪಣೆ .

ಮಧ್ಯಾಹ್ನ 3.30ಗಂಟೆಗೆ ರಾಯಚೂರು ನಗರದ ಸಮೃದ್ಧಿ ಯೋಜನೆಯಡಿ ಫಲಾನುಭವಿಯ ಬ್ಲಾಕ್ ಬ್ರಡ್ ಬಟ್ಟೆ ಅಂಗಡಿ ಹಾಗೂ ಆರೋಗ್ಯ ಆರ್ಗಾನಿಕ್ ಸ್ಟೋರ್ ಉದ್ಘಾಟನೆ ಹಾಗೂ 4ಗಂಟೆಗೆ ನಗರದ ವಾಲ್ಮೀಕಿ ಭವನ ಲೋಕಾರ್ಪಣೆ.

4.30ಕ್ಕೆ ನಗರದ ಗ್ರೀನ್ ಪ್ಯಾಲೇಸ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ.

ಸಂಜೆ 6ಗಂಟೆಗೆ ನಗರದಿಂದ ರಸ್ತೆ ಮಾರ್ಗವಾಗಿ ಯಾದಗಿರಿ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ