Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾ ಮಹೋತ್ಸವ: ತುಲಾ ಲಗ್ನದಲ್ಲಿ ಅರಮನೆ ಪ್ರವೇಶಿಸಿದ ಅಭಿಮನ್ಯು ಬಳಗ- ಸಚಿವ ಸೋಮಶೇಖರ್ ಸ್ವಾಗತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಗುರುವಾರ ತುಲಾ ಲಗ್ನದಲ್ಲಿ ಗಜಪಡೆ ಅರಮನೆಯನ್ನು ಪ್ರವೇಶಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆನೆಗಳನ್ನು ಸ್ವಾಗತಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗುರುವಾರ ಮೈಸೂರಿನ ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆಗೆ ಸ್ವಾಗತಿಸಲಾಯಿತು.

ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದಲ್ಲಿ ಎಂಟು ಆನೆಗಳು ಅರಮನೆ ಪ್ರವೇಶ ಮಾಡಿದವು. ಮಂಗಳ ವಾದ್ಯ, ಪೂರ್ಣ ಕುಂಭ ಸ್ವಾಗತದ ಮೂಲಕ ಆನೆಗಳನ್ನು ಬರಮಾಡಿಕೊಳ್ಳಲಾಯಿತು.

ಬೆಳಗ್ಗೆ 6.45ಕ್ಕೆ ಮೈಸೂರಿನ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನೆರವೇರಿದ್ದು, ಬಳಿಕ 7.35ಕ್ಕೆ ಅರಣ್ಯ ಭವನದಿಂದ ಅರಮನೆಯತ್ತ ಮೆರವಣಿಗೆ ಮೂಲಕ ಆನೆಗಳು ಆಗಮಿಸಿದವು.

ಗಜಪಡೆ ಸ್ವಾಗತ ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ನಿಗಮ ಮಂಡಳಿಗಳ ಅಧ್ಯಕ್ಷರಾದ ಎಚ್.ವಿ‌.ರಾಜೀವ್, ಎಂ. ಶಿವಣ್ಣ, ಎನ್.ವಿ.ಫಣೀಶ್, ಎಲ್.ಆರ್.ಮಹದೇವಸ್ವಾಮಿ, ಎಂ.ಆರ್.ಕೃಷ್ಣಪ್ಪಗೌಡ, ಉಪಮೇಯರ್ ಅನ್ವರ್ ಬೇಗ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್‌ಪಿ ಆರ್.ಚೇತನ್, ಜಿಪಂ ಸಿಇಒ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಡಿಸಿಎಫ್ ಕರಿಕಾಳನ್, ಎಡಿಸಿ ಡಾ. ಮಂಜುನಾಥಸ್ವಾಮಿ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಸೇರಿದಂತೆ ನಾನಾ ಮುಖಂಡರು ಮತ್ತು ಅಧಿಕಾರಿಗಳು ಹಾಜರಿದ್ದರು.

ಬೆಚ್ಚಿದ ಅಶ್ವತ್ಥಾಮ
ಅಶ್ವತ್ಥಾಮ ಆನೆ ಮೊದಲ ಬಾರಿಗೆ ದಸರಾಗೆ ಬಂದಿದೆ. ಹೀಗಾಗಿ ನಗರದ ಸದ್ದುಗದ್ದಲಕ್ಕೆ ಬೆಚ್ಚಿ ಫುಟ್‍ಪಾತ್ ಏರಿತ್ತು. ಅರಣ್ಯಭವನದಿಂದ ಅರಮನೆಗೆ ಬರುವ ವೇಳೆ ರಸ್ತೆಯಿಂದ ಫುಟ್‍ಪಾತ್ ಮಾರ್ಗಕ್ಕೆ ತೆರಳಿತ್ತು.

ಬಳಿಕ ಮಾವುತ, ಕಾವಾಡಿ ಆನೆಯನ್ನು ನಿಯಂತ್ರಿಸಿ, ಫುಟ್‍ಪಾತ್‍ನಿಂದ ಕೆಳಗಿಳಿಸಿ, ಅರಮನೆಗೆ ಕರೆತರಲಾಯಿತು.

ದಸರಾ ಉದ್ಘಾಟನೆಗೆ ಇನ್ನೂ ಯಾರ ಹೆಸರು ಅಂತಿಮಗೊಳಿಸಿಲ್ಲ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮ ಶೇಖರ್‌, ಅ.7ರಂದು ದಸರಾ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಅ.15ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ.

ಸೆ.23ರವರೆಗೆ ಅಧಿವೇಶನ ಇರುವುದರಿಂದ ದಸರಾ ಉದ್ಘಾಟನೆ ಯಾರಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ. ಅಧಿವೇಶನ ಮುಗಿದ ಬಳಿಕ ಪ್ರಮುಖರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.

ದಸರಾ ಉದ್ಘಾಟನೆಗೆ ಇನ್ನೂ ಯಾರ ಹೆಸರು ಅಂತಿಮಗೊಳಿಸಿಲ್ಲ. ದಸರಾ ಉದ್ಘಾಟನೆಗೆ ಗಣ್ಯರ ಆಯ್ಕೆಯನ್ನು ದಸರಾ ಉನ್ನತಾಧಿಕಾರ ಸಮಿತಿಯಲ್ಲಿ ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲಾಗಿದೆ.

ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಸಂಬಂಧ ಯಾರಾದರೂ ಸಲಹೆ ಕೊಡಬಹುದು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಆಯ್ಕೆ ಮುಖ್ಯಮಂತ್ರಿ ಅವರಿಗೆ ಸೇರಿದ್ದು ಎಂದು ಹೇಳಿದರು.

ದೇವಸ್ಥಾನ ತೆರವು ವಿಚಾರವಾಗಿ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶದ ಕುರಿತು ಸಚಿವ ಸಂಪುಟದಲ್ಲಿಟ್ಟು ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ಆದೇಶ ಮಾಡಲಾಗುವುದೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ದೇಗುಲ ತೆರವು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಸಚಿವ ಸೋಮ ಶೇಖರ್‌ ತಿಳಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ