NEWSನಮ್ಮರಾಜ್ಯ

“ವಿಜಯಪಥ” ವರದಿ ಪರಿಣಾಮ KKRTC- NEKRTC ನಾರಾಯಣಪ್ಪ ಕುರುಬರ ಹುದ್ದೆ ಮತ್ತೆ ಮಾರ್ಪಾಡು: ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ನೇಮಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗೆ ನಿಯಮ 17/1 ರಡಿಯಲ್ಲಿ ಈ ಹಿಂದೆ ಡಿಸಿ ಆಗಿದ್ದ ನಾರಾಯಣಪ್ಪ ಕುರುಬರ ಅವರನ್ನು ಹುದ್ದೆ ಮತ್ತು ವೇತನ ಶ್ರೇಣಿ ಯೊಂದಿಗೆ ನಿನ್ನೆ (ಸೋಮವಾರ) ಪ್ರತಿನಿಯೋಜಿಸಲಾಗಿತ್ತು. ಮತ್ತೆ ಇಂದು (ಆ.31) ಅವರ ಹುದ್ದೆಯನ್ನು ಬದಲಾವಣೆ ಮಾಡಿ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನಾರಾಯಣಪ್ಪ ಕುರುಬರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಲ್ಲಿ ನೌಕರರಿಂದ ಲಂಚ ಪಡೆದ ಆರೋಪ ಹೊತ್ತಿರುವ ಅಧಿಕಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಗಸ್ಟ್‌ 21ರಂದು ತರಾತುರಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರದ ವಿಭಾಗೀಯ ನಿಯಂತ್ರಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು.

ಆದರೆ ಅಂತಹ ಲಂಚಕೋರ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಆ ಅಧಿಕಾರಿಯನ್ನು ಇಂದು (ಆ.30) ಸಾರಿಗೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪಥದಲ್ಲಿ ನಿನ್ನೆ ವರದಿ ಪ್ರಕಟವಾಗಿತ್ತು.

ಯಾವುದೇ ತಪ್ಪು ಮಾಡದ ಸಾವಿರಾರು ಸಾರಿಗೆ ನೌಕರರನ್ನು ವಿಚಾರಣೆಗೂ ಒಳಪಡಿಸದೆ ಏಕಾಏಕಿ ವಜಾ, ವರ್ಗಾವಣೆ ಮತ್ತು ಅಮಾನತಿನ ಶಿಕ್ಷೆ ನೀಡಿದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಂದು ಲಂಚಾರೋಪ ಇರುವ ಅಧಿಕಾರಿಯನ್ನು ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವುದು ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾಣುತ್ತಿದೆ ಎಂಬ ವರದಿ ಪ್ರಕಟವಾಗಿತ್ತು.

ಈ ಎಲ್ಲವನ್ನು ಗಮನಿಸಿ ಸಕ್ಷಮ ಪ್ರಾಧಿಕಾರಿಗಳ ಆದೇಶದನ್ವಯ ನಿನ್ನೆ ನಾರಾಯಣಪ್ಪ ಕುರುಬರ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗೆ ನೇಮಿಸಿದ್ದನ್ನು ಮಾರ್ಪಡಿಸಿ ಇಂದು (ಆ.31) ಆಡಳಿತಾತ್ಮಕ ಕಾರಣಗಳ ಮೇಲೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿಯ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ನೇಮಕ ಮಾಡಿರುವುದಾಗಿ ಆದೇಶ ಹೊರಡಿಸಿದೆ.

ನಾರಾಯಣಪ್ಪ ಕುರುಬರ ಅವರ ನಿಯೋಜನೆಯು ಆಡಳಿತಾತ್ಮಕ ಕಾರಣಗಳ ಮೇರೆಗೆ ಮಾಡಲಾಗಿದ್ದು, ಕಾರ್ಯಸ್ಥಾನದಲ್ಲಿ ಬದಲಾವಣೆ ಇರುವುದರಿಂದ ನಿಯಮಾನುಸಾರ ವರ್ಗಾವಣೆ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ನಿಯೋಜನೆಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳತಕ್ಕದ್ದು ಎಂದು ಆಗಸ್ಟ್‌ 31 ರಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...