NEWSನಮ್ಮರಾಜ್ಯಸಿನಿಪಥ

ಕೋವಿಡ್‌ ಸಾವು-ನೋವಿನಲ್ಲಿ ಸಂಭ್ರಮ ಬೇಡ : ಅಭಿಮಾನಿಗಳಿಗೆ ಗಣೇಶ್​ ವಿನಮ್ರ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜು.2ರಂದು ಗೋಲ್ಡನ್​ ಸ್ಟಾರ್​ ಗಣೇಶ್​ ಅವರ ಜನ್ಮದಿನ ಹಾಗಾಗಿ, ಹುಟ್ಟುಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಲ್ಲರಿಗಾಗಿ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್​ನಿಂದಾಗಿ ಎಲ್ಲ ಕ್ಷೇತ್ರಗಳ ರೀತಿ ಚಿತ್ರರಂಗ ಕೂಡ ತತ್ತರಿಸಿದೆ. ಆರ್ಥಿಕ ನಷ್ಟದ ಹೊಡೆತ ಒಂದುಕಡೆಯಾದರೆ, ಜನರು ಪ್ರಾಣಗಳನ್ನು ಕಳೆದುಕೊಂಡಿರುವ ನೋವು ಇನ್ನೊಂದು ಕಡೆ. ಈ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ ಎಂದು ಮನವಿ ಮಾಡಿದ್ದಾರೆ.

ಪ್ರೀತಿಯ ಅಭಿಮಾನಿ ಗೆಳೆಯರಿಗೆ… ಎಲ್ಲರಿಗೂ ನಿಮ್ಮ ಗಣೇಶ್​ ಮಾಡುವ ನಮಸ್ಕಾರಗಳು. ಮೊದಲಿಗೆ ನನಗೆ ಅರಿವಿದ್ದು ಅರಿವಿಲ್ಲದೆಯೋ ಈ ಕೊವಿಡ್​ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಪ್ರತಿ ವರ್ಷ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿದ್ದೀರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು ಗೆಳೆಯರು ಬಲಿಯಾಗಿದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನ ನಲುಗಿ ಹೋಗಿದೆ’ ಎಂದು ಗಣೇಶ್​ ಹೇಳಿದ್ದಾರೆ.

ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ ಎಂದೆನಿಸಿ, ಈ ವರ್ಷ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ. ಅಲ್ಲದೇ ನಾನು ಜನ್ಮದಿನದಂದು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿರುತ್ತೇನೆ.

ಪ್ರತಿ ವರ್ಷವೂ ಹುಟ್ಟುಹಬ್ಬ ಆಚರಣೆಗೆ ಪ್ರೀತಿಯಿಂದ ನೀವು ತರುವ ಕೇಕ್​, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೇ ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿ ಇರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ. ಇಂತಿ ನಿಮ್ಮವ ಗಣೇಶ್​’ ಎಂದು ಪತ್ರದಲ್ಲಿ ಗೋಲ್ಡನ್​ ಸ್ಟಾರ್​ ಮನವಿ ಮಾಡಿಕೊಂಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು