Vijayapatha – ವಿಜಯಪಥ
Saturday, November 2, 2024
CrimeNEWSನಮ್ಮರಾಜ್ಯ

ಯುವಕನ ಒನ್​​ ಸೈಡ್ ಲವ್ : ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಚಾಕು ಇರಿದ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತಳಿಗೆ ಚಾಕು ಇರಿದ ಘಟನೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದ ಬಾಲಕಿ ಪ್ರೀತಿಸಲು ನಿರಾಕರಿಸಿದಳು, ಇದರಿಂದ ಕುಪಿತಗೊಂಡ ಯುವಕ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಚಾಕುವಿನಿಂದ ಇರಿದಿದ್ದರಿಂದ ಅಪ್ರಾಪ್ತೆಯ ಕುತ್ತಿಗೆ ಹಾಗೂ ಕಿವಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಪ್ರಾಪ್ತೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ, 23 ವರ್ಷದ ರವಿ ಅಥಣಿ ಎಂಬ ಯುವಕ ಆಕೆಯನ್ನು ಪ್ರೀತಿಸುತ್ತಿದ್ದ, ಆದರೆ ಅಕೆ ಈತನನ್ನು ಪ್ರೀತಿಸುತ್ತಿರಲಿಲ್ಲ. ಇದು ಒನ್​​ ಸೈಡ್ ಲವ್  ಆಗಿದೆ.

ಆದರೂ, ಆಕೆಯನ್ನು ಕೆಲ ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ, ಬಾಲಕಿ ಅದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದು, ಚಾಕು ಇರಿದಿದ್ದಾನೆ.

ಸದ್ಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಅಪ್ರಾಪ್ತೆ ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಯುವಕನನ್ನು ತೇರದಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ