NEWSನಮ್ಮರಾಜ್ಯಸಂಸ್ಕೃತಿ

ಪ್ರಕೃತಿ ಜೊತೆ ಬದುಕಿದವರು ಪೂರ್ಣಚಂದ್ರ ತೇಜಸ್ವಿ : ಮಾಜಿ ಸಿಎಂ ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿಯವರು ಎಂದೂ ತಾನು ಕುವೆಂಪುರವರ ಮಗ ಎಂದು ಹೇಳಿ ಲಾಭ ಪಡೆಯುವ ಪ್ರಯತ್ನ ಮಾಡಿಲ್ಲ. ಅವರದ್ದು ಕುವೆಂಪು ಅವರಿಗಿಂತ ವಿಭಿನ್ನ ಯೋಚನಾಶೈಲಿ. ಸಾಹಿತ್ಯ ಮತ್ತು ಕೃಷಿ ಅವರ ಕೃಷಿಯಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲ. ಆದರೆ ಅವರಿಂದ ಪರಿಸರವನ್ನು ಪ್ರೀತಿಸುವುದನ್ನಾದರೂ ನಾವು ಕಲಿಯಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ ಎಂದು ತಿಳಿಸಿದರು.

ಪೂರ್ಣಚಂದ್ರ ತೇಜಸ್ವಿ ಒಬ್ಬ ಪ್ರಕೃತಿ-ಪರಿಸರ ಪ್ರೇಮಿ. ಪರಿಸರದ ಬಗ್ಗೆ ಪುಸ್ತಕಗಳನ್ನಷ್ಟೇ ಬರೆದಿಲ್ಲ, ಪ್ರಕೃತಿ ಜೊತೆ ಬದುಕಿದವರು. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ ಎಂದರು.

ಸಮಾಜವಾದಿಯಾಗಿದ್ದ ತೇಜಸ್ವಿಗೆ ಸಕ್ರಿಯ ರಾಜಕಾರಣದ ಬಗ್ಗೆ ಹೆಚ್ಚು ಆಸಕ್ತಿ ಇರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು ಎಂದು ತಿಳಿಸಿದರು.

ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ ಎಂದರು.

ಸಾಮಾನ್ಯವಾಗಿ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿ, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು ಎಂದು ಹೇಳಿದರು.

ಆರೋಗ್ಯ ಸಚಿವ ಡಾ.ಸುಧಾಕರ್‌, ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್. ಶಂಕರ್, ಪ್ರೊ. ಜೋಮಿ ಆಗಸ್ಟಿನ್, ಡಾ. ಚೇತನ ಬಡೇಕರ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ