NEWSನಮ್ಮರಾಜ್ಯರಾಜಕೀಯ

ಸೋಲಿನ ಭೀತಿಯಿಂದ ಚುನಾವಣೆ ಮುಂದೂಡಿಕೆ: ಬಿಜೆಪಿ ವಿರುದ್ಧ ಪೃಥ್ವಿ ರೆಡ್ಡಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್‌ ನಿಯಂತ್ರಣ, ರೈತರ ಸಮಸ್ಯೆ, ಆರ್ಥಿಕತೆ, ಉದ್ಯೋಗ ಸೃಷ್ಟಿ, ರಸ್ತೆ ದುರಸ್ತಿ ಮುಂತಾದ ಎಲ್ಲ ಕ್ಷೇತ್ರದಲ್ಲೂ ವಿಫಲವಾಗಿರುವ ಬಿಜೆಪಿಗೆ ಚುನಾವಣೆಗಳಲ್ಲಿ ಸೋಲಿನ ಭೀತಿಯಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಟ್ವೀಟ್‌ ಮಾಡಿದ್ದಾರೆ.

ಹೌದು! ಚುನಾವಣೆಯಲ್ಲಿ ಸೋಲುವ ಭೀತಿಯಿಂದಲೇ ಬಿಬಿಎಂಪಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಪದೇಪದೆ ಮುಂದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿಯ ವಾರ್ಡ್‌ಗಳ ಮರುವಿಂಗಡಣೆ ಕಾರ್ಯವು ಆಮೆಗತಿಯಲ್ಲಿ ಸಾಗುತ್ತಿದೆ. ಕಳೆದ 13 ತಿಂಗಳಿನಿಂದ ಜನಪ್ರತಿನಿಧಿಗಳ ಬದಲು ಅಧಿಕಾರಿಗಳು ಮಹಾನಗರ ಪಾಲಿಕೆಯನ್ನು ಮನಸೋಇಚ್ಛೆ ಮುನ್ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗಿದೆ.

ಚುನಾವಣೆ ಮುಂದೂಡಲು ಪದೇಪದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಮೂಲ್ಯ ಸಮಯವನ್ನೂ ಬಿಜೆಪಿ ಹಾಳು ಮಾಡುತ್ತಿದೆ. ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಇನ್ನಷ್ಟು ತಿಂಗಳು ಮುಂದೂಡುವ ಉದ್ದೇಶದಿಂದಲೇ ಕ್ಷೇತ್ರ ಮರುವಿಂಗಡಣೆಗೆ ಸರ್ಕಾರ ಪ್ರತ್ಯೇಕ ಆಯೋಗ ರಚಿಸಿದೆ” ಎಂದು ಪೃಥ್ವಿ ರೆಡ್ಡಿ ಕಿಡಿಕಾರಿದ್ದಾರೆ.

ಕೋವಿಡ್‌ ಸಂದರ್ಭದಲ್ಲಿ ಬೆಡ್‌, ಆಕ್ಸಿಜನ್‌ ಸೌಲಭ್ಯ ಕಲ್ಪಿಸಲು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರಿತು. ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಉದ್ಯೋಗ ಸೃಷ್ಟಿಯಲ್ಲೂ ಸರ್ಕಾರ ವಿಫಲವಾಗಿದ್ದು, ದೇಶದೆಲ್ಲೆಡೆ ನಿರುದ್ಯೋಗ ತಾಂಡವವಾಡುತ್ತಿದೆ.

ದೇಶದ ಅರ್ಥ ವ್ಯವಸ್ಥೆ ಕುಸಿದು ಹೋಗಿದೆ. ದೇಶದ ಸಾಲದ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ರಸ್ತೆಗಳಿಗೆ ಹೊಸದಾಗಿ ಡಾಂಬರು ಹಾಕುವುದು ಹಾಗಿರಲಿ, ಗುಂಡಿಗಳಿಗೆ ವೈಜ್ಞಾನಿಕ ವಿಧಾನದಲ್ಲಿ ತೇಪೆ ಹಾಕಲೂ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ.

ಸಣ್ಣ ಮಳೆಗೂ ತೇಪೆ ಕಿತ್ತುಹೋಗುತ್ತಿದೆ. ಹೀಗೆ ಎಲ್ಲದರಲ್ಲೂ ವಿಫಲವಾಗಿರುವ ಬಿಜೆಪಿಗೆ ಸೋಲಿನ ಭೀತಿಯಿದೆ. ಆದ್ದರಿಂದ ಏನಾದರೊಂದು ಕಾರಣ ಹುಡುಕಿಕೊಂಡು ಚುನಾವಣೆಗಳನ್ನು ಮುಂದೂಡುತ್ತಿದೆ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

1 Comment

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು