CrimeNEWSನಮ್ಮರಾಜ್ಯಸಿನಿಪಥ

ಹೃದಯಾಘಾತ: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡುವಾಗ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು. ಆಗಲೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಶಿವರಾಜ್​ಕುಮಾರ್​ ಅವರ ಮಗಳು ಆಸ್ಪತ್ರೆಗೆ ಈಗಾಗಲೇ ಭೇಟಿ ಕೊಟ್ಟಿದ್ದರು. ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಇನ್ನು ವಿಷಯ ಬಹಿರಂಗವಾಗುತ್ತಿದ್ದಂತೆಯೇ ಆಸ್ಪತ್ರೆಯ ಬಳಿ ಅಭಿಮಾನಿಗಳು ಗುಂಪು ಸೇರುತ್ತಿದ್ದಾರೆ. ಜತೆಗೆ ಪೊಲೀಸರು ಸಹ ಬಿಗಿ ಬಂದೋಬಸ್ತ್​ ಮಾಡಿದ್ದಾರೆ.

ಬೆಳಗ್ಗೆ ಅವರು ವ್ಯಾಯಾಮ ಮಾಡುವಾಗ ಕುಸಿದು ಬಿದ್ದ ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ನಂತರ ಅವರನ್ನು ವಿಕ್ರಂ ಆಸ್ಪತ್ರೆಗೆ ಶಿಫ್ಟ್​ ಮಾಡಲಾಯಿತು. ಇನ್ನು ವಿಕ್ರಂ ಆಸ್ಪತ್ರೆಯ ಬಳಿ ರಾಜ್​ ಕುಟುಂಬದವರು ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ನಟ ಯಶ್​ ಸಹ ಈಗ ಆಸ್ಪತ್ರೆಗೆ ಬಂದಿದ್ದು, ಪುನೀತ್ ಅವರ ಆರೋಗ್ಯದ ಕುರಿತಾಗಿ ವೈದ್ಯರ ಬಳಿ ವಿಚಾರಿಸಿದರು.

ಪುನೀತ್ ರಾಜ್​ಕುಮಾರ್ ಅವರ ಮನೆ ಹಾಗೂ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಅಭಿಮಾನಿಗಳು ಬರುವ ಸಾಧ್ಯತೆ ಇರುವ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂ ವಿಷಯ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ನಿರ್ದೇಶಕರು, ನಟ-ನಟಿಯರು ಹಾಗೂ ನಿರ್ಮಾಪಕರು ಆಸ್ಪತ್ರೆಗೆ ಬರುತ್ತಿದ್ದಾರೆ. ನಟ ಶ್ರೀಮುರಳಿ, ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಸಹ ಆಸ್ಪತ್ರೆಗೆ ಬಂದಿದ್ದರು.

ಇನ್ನು ಪುನೀತ್​ ರಾಜ್​ಕುಮಾರ್​ ಅವರು ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿವಹಿಸುತ್ತಿದ್ದ ವ್ಯಕ್ತಿಯಾಗಿದ್ದು, ಅವರ ನಿತ್ಯ ತಪ್ಪದೆ ವ್ಯಾಯಾಮ ಮಾಡುತ್ತಿದ್ದರು. ವಾರಾಂತ್ಯದಲ್ಲಿ ಕಿಲೋ ಮೀಡರ್​ ಗಟ್ಟಲೆ ಸೈಕ್ಲಿಂಗ್​ ಸಹ ಮಾಡುತ್ತಿದ್ದರು. ಇಂತಹ ವ್ಯಕ್ತಿಗೆ ಹೃದಯಾಘಾತವಾಗಿದೆ ಎಂದರೆ ನಂಬಲು ಯಾರಿಗೂ ಸಾಧ್ಯವಿಲ್ಲ. ಇನ್ನು ನಟನ ಆರೋಗ್ಯದ ಬಗ್ಗೆ ವಿದೇಶದಲ್ಲಿರುವ ಮಗಳಿಗೆ ಮಾಹಿತಿ ನೀಡಲಾಗಿದೆ.

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ರಿಲೀಸ್​ ಆಗಿತ್ತು. ಇನ್ನು ಅವರ ಬಹುನಿರೀಕ್ಷಿತ ಸಿನಿಮಾ ಜೇಮ್ಸ್​ ಚಿತ್ರೀಕರಣದ ಹಂತದಲ್ಲಿತ್ತು. ಇದರ ಜೊತೆಗೆ ದ್ವಿತ್ವ ಸಿನಿಮಾ ಸಹ ಇತ್ತೀಚೆಗಷ್ಟೆ ಪ್ರಕಟವಾಗಿತ್ತು. ಹೊಂಬಾಳೆ ಫಿಲಂಸ್​ ಈ ಸಿನಿಮಾ ನಿರ್ಮಿಸುತ್ತಿದ್ದು, ಲೂಸಿಯಾ ಪವನ್​ ಕುಮಾರ್​ ಇದರ ನಿರ್ದೇಶನ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ