Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ʼಸುಳ್ಳಿನ ಜಪʼ ಮಾಡುವುದೇ ಅವರಿಗೆ ನಿತ್ಯ ಕಾಯಕ: ಸಿದ್ದರಾಮಯ್ಯಗೆ ಚಾಟಿ ಬೀಸಿದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾತಿಗಣತಿ ವಿಚಾರವಾಗಿ ಮಾಜಿಮುಖ್ಯ ಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ನಡುವೆ ಮತ್ತೊಂದು ಸುತ್ತಿನ ವಾಗ್ವಾದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ ಮಾಜಿ ಸಿಎಂ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.

ಸುಳ್ಳನ್ನು ಪದೇಪದೆ ಹೇಳುತ್ತಾ ಜನರನ್ನು ದಾರಿತಪ್ಪಿಸುವ ʼಸಿದ್ದಕಲೆʼ ಅವರಿಗೆ ಚನ್ನಾಗಿ ಸಿದ್ಧಿಸಿದೆ ಎಂಬುದನ್ನು ನಾನು ಬಲ್ಲೆ. ನಿತ್ಯವೂ ʼಸುಳ್ಳಿನ ಜಪʼ ಮಾಡುವುದೇ ಅವರಿಗೆ ನಿತ್ಯ ಕಾಯಕ. ಇದು ಸತ್ಯಕ್ಕೆ ಮತ್ತು ರಾಜ್ಯಕ್ಕೆ ಎಸಗುವ ಅಪಚಾರ ಹಾಗೂ ಶಾಂತ ಸಮಾಜವನ್ನು ಒಡೆಯುವ ಹುನ್ನಾರ ಎಂದು ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಆಗ ಕಾಂತರಾಜು ಅವರ ವರದಿಯ ಬಗ್ಗೆ ಅವರು ಪ್ರಸ್ತಾಪವನ್ನೇ ಮಾಡಲಿಲ್ಲ ಮತ್ತೂ ಚರ್ಚೆ ಮಾಡುವ ಧೈರ್ಯವನ್ನೇಕೆ ತೋರಲಿಲ್ಲ? ಹೀಗಾಗಿ ಕೋಪದ ಪ್ರಶ್ನೆ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ.

ಆ ವರದಿಯಲ್ಲಿ ಸಹಿಯೇ ಇಲ್ಲ ಎಂದು ಸ್ವತಃ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿಬಿಟ್ಟಿದ್ದಾರೆ. ಮುಖ್ಯಮಂತ್ರಿ ಆಗಿದ್ದವರು, ಈಗ ಪ್ರತಿಪಕ್ಷ ನಾಯಕರೂ ಆಗಿರುವ ʼರಾಜಕೀಯ ಪಂಡಿತʼರಿಗೆ ಹೇಳಿಕೆ ನೀಡುವ ಮುನ್ನ ಆ ಬಗ್ಗೆ ಕನಿಷ್ಠ ಸಾಮಾನ್ಯ ಪ್ರಜ್ಞೆ ಇರಬೇಕಾಗಿತ್ತು ಎಂದು ಛೇಡಿಸಿದ್ದಾರೆ.

ಜಾತಿ ಗಣತಿ ವರದಿ ಬಗ್ಗೆ ಇಷ್ಟೆಲ್ಲ ಪ್ರೀತಿ-ಕಾಳಜಿ ತೋರುವ ಈ ಮಹಾನುಭಾವರು, ನಿನ್ನೆಯವರೆಗೂ ನಡೆದ ವಿಧಾನಮಂಡಲ ಕಲಾಪದಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ? ತಮ್ಮ ಪಕ್ಷದಲ್ಲೇ ತಮಗೆ ಬೀಳುತ್ತಿರುವ ಒಳ ಏಟುಗಳ ಹೊಡೆತ ತಾಳಲಾಗದೆ, ಅದೆಲ್ಲವನ್ನೂ ಮುಚ್ಚಿಟ್ಟುಕೊಳ್ಳಲು ಬಹಿರಂಗವಾಗಿ ಬೊಬ್ಬೆ ಹೊಡೆಯವುದು ಹತಾಶೆ ಮತ್ತು ರಾಜಕೀಯ ಅವಕಾಶವಾದಿತನವಷ್ಟೇ ಎಂದು ಹೇಳಿದ್ದಾರೆ.

ಇಂತಹ ಪ್ರಮುಖ ವರದಿಯನ್ನು ಸಲ್ಲಿಸಬೇಕಾದ್ದು ಮುಖ್ಯಮಂತ್ರಿಗಳಿಗೇ ವಿನಾ ಸಚಿವರಿಗಲ್ಲ. ಸುದೀರ್ಘ ರಾಜಕೀಯ ಅನುಭವ, ಸಂಸದೀಯ ಚೆರಿತ್ರೆ ಇದ್ದರಷ್ಟೇ ಸಾಲದು, ಕೊಂಚ ಸಾಮಾನ್ಯ ಜ್ಞಾನವೂ ಇರಲಿ. ಪದೇಪದೆ ʼಸಿದ್ದಹಸ್ತಿಕೆʼ ತೋರುವ ಪ್ರಯತ್ನ ಬೇಡ ಎಂದು ಎಚ್ಚರಿಸಿದ್ದಾರೆ.

ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು ರಾಜಕೀಯ ಮರುಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆಯುವ ಮುನ್ನ ತಮ್ಮ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸಲಿ. ಸಮಾಜದ ಶಾಂತಿಗೆ ಕೊಳ್ಳಿ ಇಡುವ ದುಸ್ಸಾಹಸಕ್ಕೆ ಕೈಹಾಕಿದರೆ ಜನರೇ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ

ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ವಿಕೃತ ಆನಂದ ಅನುಭವಿಸುವುದು ಹೇಯ. ಮುಗ್ಧ ಜನರಲ್ಲಿ ಜಾತಿಯ ವಿಷಬೀಜ ಭಿತ್ತುವುದು ರಾಜಕೀಯ ನಿಕೃಷ್ಟತೆಯ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕುಮಾರಸ್ವಾಮಿ ಅವರು ಜಾತಿ ಗಣತಿ ವರದಿಯನ್ನು ಸ್ವೀ ಕರಿಸಲಿಲ್ಲ . ಜಾತಿ ಗಣತಿ ಬಿಡುಗಡೆಗೆ ಅಂದಿನ ಸಚಿವ ಪುಟ್ಟ ರಂಗಶೆಟ್ಟಿ ಪ್ರಯತ್ನ ಮಾಡಿದ್ದರು. ಆದರೆ ಎಚ್.ಡಿ. ಕುಮಾರಸ್ವಾಮಿ ಬಿಡುಗಡೆಮಾಡಲಿಲ್ಲ . ಪುಟ್ಟ ರಂಗಶೆಟ್ಟಿ ಯವರನ್ನು ಕುಮಾರಸ್ವಾಮಿ ಹೆದರಿಸಿ ಬಿಟ್ಟಿದ್ದರು. ಇದನ್ನು ನಾನು ಹೇಳಿದರೆ ಕುಮಾರಸ್ವಾಮಿಗೆ ಕೋಪ ಬರುತ್ತೆ. ಸಿದ್ದರಾಮಯ್ಯ ಕೂತ್ಕೊಂಡು ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ ಎಂದು ಬೆಂಗಳೂರಿನಲ್ಲಿ ಶನಿವಾರ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...