NEWSನಮ್ಮರಾಜ್ಯಶಿಕ್ಷಣ-

ಅಕ್ಟೋಬರ್‌ 21ರಿಂದ ಪ್ರಾಥಮಿಕ ಶಾಲೆಗಳು ಆರಂಭ: ಸಚಿವ ನಾಗೇಶ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಕಾರಣದಿಂದ ಮುಚ್ಚಿರುವ ಪ್ರಾಥಮಿಕ ಶಾಲೆಗಳನ್ನು ಅಕ್ಟೋಬರ್ 21 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನದ ಬಳಿಕ ಈ ಬಗ್ಗೆ ಅಧಿಕೃತ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ‌ ಸಲಹೆ ಈಗಾಗಲೇ ವರದಿ ಕೊಟ್ಟಿದೆ. ಎಲ್ಲವನ್ನೂ ವಿಮರ್ಶೆ ಮಾಡಿ ಇಂದು ಸಂಜೆಯೊಳಗೆ ನಿರ್ಧಾರ ಪ್ರಕಟ ಮಾಡಲಾಗುವುದು ಎಂದಿದು ಹೇಳಿದ್ದಾರೆ.

ಜತೆಗೆ ಈ ಬಾರಿ ಶಾಲೆಗಳನ್ನು ಆರಂಭಿಸಿದ ನಂತರ ಎರಡು ಹಂತ ಇರುವುದಿಲ್ಲ. ಒಂದೇ ಹಂತದಲ್ಲಿ‌ 1 ರಿಂದ 5 ತರಗತಿ ಆರಂಭ ಮಾಡಲಾಗುವುದಿಲ್ಲ. ಆರಂಭದಲ್ಲಿ ಮಧ್ಯಾಹ್ನದ ವರೆಗೆ ಮಾತ್ರ ತರಗತಿ ನಡೆಸಲಾಗುವುದು, ಅದಾದ ಬಳಿಕ ಸ್ಥಿತಿಗತಿ ನೋಡಿಕೊಂಡು ಪೂರ್ಣಾವಧಿ ತರಗತಿಗಳನ್ನು ನಡೆಸಲಾಗುವುದು ಎಂದು ಸಚಿವರು ವಿವರಿಸಿದರು.

ಇನ್ನು ಮಕ್ಕಳಿಗೆ ಲಸಿಕೆ ನೀಡುವ ವಿಚಾರವಾಗಿ ಮಾತನಾಡಿದ ಅವರು, ಮಕ್ಕಳಿಗೆ ಲಸಿಕೆ ಸಿಗುತ್ತಿರುವುದು ನಿಜಕ್ಕೂ ಸಿಹಿ ಸುದ್ದಿ. ಮಕ್ಕಳಿಗೆ ಲಸಿಕೆ ಬಂದರೆ ಬೇಗನೇ ಕೊಟ್ಟು ಮುಗಿಸುತ್ತೇವೆ. ಶಾಲೆಯಲ್ಲಿಯೇ ಲಸಿಕೆ‌ ಕೊಡುವ ಚಿಂತನೆ ಇದೆ ಎಂದು ತಿಳಿಸಿದರು.

ಮಕ್ಕಳಿಗೂ ಸಹ ಲಸಿಕೆ ನೀಡಲು ಅನುಮೋದನೆ ಸಿಕ್ಕಿದ್ದು, ಪೋಷಕರಿಗೂ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆಚ್ಚು ಭಯಪಡುವ ಅವಶ್ಯಕತೆ ಇರುವುದಿಲ್ಲ. ಇನ್ನು ರಾಜ್ಯದಲ್ಲಿ ಈಗಾಗಲೇ ಡಿಗ್ರಿ , ಪಿಯುಸಿ ಸೇರಿದಂತೆ ಪ್ರೌಢ ಶಾಲೆಗಳನ್ನು ಆರಂಭ ಮಾಡಲಾಗಿದೆ.

ಆದರೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇನ್ನೂ ಕಡಿಮೆಯಾಗಿಲ್ಲ. ಅಲ್ಲದೇ ದೇಶದಲ್ಲಿ ಮೂರನೇ ಅಲೆ ಬರುತ್ತದೆ, ಅದು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಸದ್ಯ ಪ್ರಕರಣಗಳು ನಿಯಂತ್ರಣದಲ್ಲಿದೆ ಎಂದರು.

ಹಾಗೆಯೇ ರಾಜ್ಯದಲ್ಲಿನ ಏಕೋಪಾಧ್ಯಾಯ ಶಾಲೆ ವಿಚಾರವಾಗಿ ಸಹ ಇಲಾಖೆ ಗಮನ ಹರಿಸಲಿದೆ. ಏಕೋಪಾದ್ಯಾಯ ಶಾಲೆಗಳಲ್ಲಿ ಮಕ್ಕಳ ಕೊರತೆಯೂ ಇದೆ. ಮೊದಲು ಮಕ್ಕಳ ಸಂಖ್ಯೆ ಹೆಚ್ಚಳ ಮಾಡಬೇಕು ಆ ಬಳಿಕ ಶಿಕ್ಷಕರ ಸಂಖ್ಯೆ ಹೆಚ್ಚಳ ಮಾಡುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ