NEWSನಮ್ಮರಾಜ್ಯ

ಸಾರಿಗೆ ಮಹಿಳಾ ಅಧಿಕಾರಿ, ಸಿಬ್ಬಂದಿಗಳ ಸ್ವ ರಕ್ಷಣೆಗೆ ಆದ್ಯತೆ: ಅಧ್ಯಕ್ಷ ನಂದೀಶ್ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾಗ್ವಾರ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಬೋಧಿಸುವ ಸ್ವರಕ್ಷಣ ಕೌಶಲ್ಯವನ್ನು ಆಸಕ್ತಿಯಿಂದ ಕಲಿತಲ್ಲಿ ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷ ಎನ್‌.ಎಸ್. ನಂದೀಶ್ ರೆಡ್ಡಿ ಸಂಸ್ಥೆಯ ಮಹಿಳಾ ನೌಕರರಿಗೆ ಸಲಹೆ ನೀಡಿದರು.

ನಿರ್ಭಯ ಯೋಜನೆಯಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಸಂಸ್ಥೆಯ ಎಲ್ಲ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿರುವ ಸ್ವರಕ್ಷಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದರ ಜತೆಗೆ ದೈನಂದಿನ ಬದುಕಿನಲ್ಲಿ ಪ್ರತಿದಿನ ಪ್ರಾಣಾಯಾಮಗಳನ್ನು ಮಾಡುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ದೃಢತೆ ಹೊಂದಲು ಸಾಧ್ಯವಿದೆ. ಇದನ್ನು ಅಳವಡಿಸಿಕೊಳ್ಳಲು ಮುಂದಾಗಿ ಎಂದು ಸಲಹೆ ನೀಡಿದರು.

ಮಹಿಳಾ ಅಧಿಕಾರಿ ಸಿಬ್ಬಂದಿಗಳಿಗೆ ಸ್ವ ರಕ್ಷಣಾ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಿರ್ಭಯ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಶೇ. 60ರಷ್ಟು ಮತ್ತು ರಾಜ್ಯ ಸರ್ಕಾರ ಶೇ.40 ರಷ್ಟು ಒಟ್ಟು 1.80 ಕೋಟಿ ರೂ. ಅನುದಾನವನ್ನು ಒದಗಿಸಿದೆ. ಅದನ್ನು ಸಂಸ್ಥೆಯ 3000 ಮಹಿಳಾ ಅಧಿಕಾರಿ, ನೌಕರರು ಸ್ವ ರಕ್ಷಣೆಯ ತರಬೇತಿ ಪಡೆಯಲಿದ್ದು ತರಬೇತಿಯು 64 ಗಂಟೆಗಳು, 32 ದಿನಗಳ ಪ್ರಾಯೋಗಿಕ ಮತ್ತು ಬೋಧನಾ ತರಬೇತಿಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಬಿಎಂಟಿಸಿ ಉಪಾಧ್ಯಕ್ಷ ಡಾ. ಎನ್.ಆರ್. ವೆಂಕಟೇಶ್ ಮಾತನಾಡಿ, ಸಂಸ್ಥೆಯು ಮಹಿಳೆಯರಿಗೆ ಆಯೋಜಿಸುತ್ತಿರುವ ಸ್ವ ರಕ್ಷಣ ತರಬೇತಿಯು ಪ್ರಾಯೋಗಿಕ ಹಾಗೂ ಬೋಧನೆ ಆಧಾರಿತ ತರಬೇತಿ ಯಾಗಿದೆ. karate-do, ಮಾರ್ಸಲ್ ಮುಂತಾದ ಪ್ರಾಯೋಗಿಕ ತರಬೇತಿ ಹಾಗೂ ಕಾನೂನು ಅರಿವನ್ನು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನು ನಿತ್ಯ ಜನವದಲ್ಲಿ ಒಡನಾಟ ಹೊಂದುವ ಸಾರ್ವಜನಿಕರೊಂದಿಗೆ ಸಂವಹನೆ, ಸಮಾಲೋಚನೆ, ಕೌಶಲ್ಯ, ಲಿಂಗ ಸಂವೇದನೆ ಅಂತಹ ವಿಷಯಗಳ ಬಗ್ಗೆಯೂ ಸಹ ತರಬೇತಿಯನ್ನು ನೀಡಲಾಗುತ್ತದೆ. ಇದನ್ನು ಎಲ್ಲಾ ವಯೋಮಾನದ ಮಹಿಳೆಯರು ಸುಲಭವಾಗಿ ಅಳವಡಿಸಿಕೊಳ್ಳಬಹುದಾಗಿದೆ. ಮಹಿಳೆಯರು ತಮ್ಮ ದೈನಂದಿನ ಜೀವನದಲ್ಲಿ ತೊಂದರೆಗಳನ್ನು ಸಮರ್ಥವಾಗಿ ಎದುರಿಸಲು ಇದು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು..

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ. ರೆಜು ಮಾತನಾಡಿ, ಮಹಿಳಾ ನೌಕರರು ಸ್ವ ರಕ್ಷಣ ತರಬೇತಿ ಪಡೆಯುವುದರಿಂದ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ತಮ್ಮನ್ನು ತಾವೇ ರಕ್ಷಿಸಿಕೊಳ್ಳಬಹುದು. ಜೊತೆಗೆ ಮಹಿಳಾ ಪ್ರಯಾಣಿಕರ ರಕ್ಷಣೆಗೆ ಸಹಾಯ ಮಾಡಲು ಈ ತರಬೇತಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಅರುಣ್, ಮಂಡಳಿ ನಿರ್ದೇಶಕರಾದ ಟಿ.ಪಿ, ಪ್ರಕಾಶ್, ಶ್ರೀಧರ್ ಕಲ್ಲೂರು, ಕೆ.ಪಿ ಭೃಗೇಶ್‌, ಅಧಿಕಾರಿ ಜಾಗ್ವರ್ ಸ್ಪೋರ್ಟ್ಸ್ ಅಕಾಡೆಮಿಯ ಮುಖ್ಯ ತರಬೇತುದಾರ ಪ್ರೊ. ಪ್ರಸಾದ್‌, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ