NEWSನಮ್ಮರಾಜ್ಯಸಿನಿಪಥ

ಇಂದು ಸಂಜೆ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಶುಕ್ರವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಇದೀಗ ಇಂದು (ಅ.30)ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋವರೆಗೂ ಮೆರವಣಿಗೆ ನಡೆಸಲಾಗುತ್ತದೆ.

ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಬರದಂತೆ ಮನವಿ ಮಾಡಿದ್ದಾರೆ. ಪುನೀತ್ ಪುತ್ರಿ ಧೃತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ.

ಧೃತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಹೀಗಾಗಿ ಅಭಿಮಾನಿಗಳು ಪುನೀತ್‌ ಅವರನ್ನು ಕಳುಹಿಸಿಕೊಡಲು ಸಹಕರಿಸಬೇಕು ಎಂದು ಕುಟುಂಬವರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...