CrimeNEWSನಮ್ಮರಾಜ್ಯ

ಜೈಲಿನಲ್ಲಿ ಶಶಿಕಲಾಗೆ ರಾಜಾತಿಥ್ಯ: ಆ.25 ರೊಳಗೆ ತನಿಖಾ ವರದಿ ಕೇಳಿದ ಹೈಕೋರ್ಟ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ರಾಜಾತಿಥ್ಯ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಖಲಿಸಲಾಗಿರುವ ಎಫ್ ಐಆರ್ ತನಿಖೆಯ ವಿವರಗಳನ್ನು ಹೈಕೋರ್ಟ್ ಶುಕ್ರವಾರ ಕೇಳಿದೆ.

ಆಗಸ್ಟ್ 25ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಎಸಿಬಿಗೆ ನಿರ್ದೇಶಿಸಿ ಮುಖ್ಯ ನ್ಯಾಯಾಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಾಧೀಶ ಸೂರಜ್ ಗೋವಿಂದ ರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.

ಚೆನ್ನೈನ ಅಲ್ವಾರ್ ಪೇಟೆಯ ಸಾಮಾಜಿಕ ಕಾರ್ಯಕರ್ತೆ ಹಾಗೂ ಶಿಕ್ಷಣ ತಜ್ಞೆ ಕೆ.ಎಸ್. ಗೀತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಂತರ ವಿಭಾಗೀಯ ಪೀಠ ಈ ಆದೇಶ ಹೊರಡಿಸಿತು.

ಬಹು ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ಅವರಿಗೆ ರಾಜಾತಿಥ್ಯ ನೀಡುವ ಆರೋಪ ಕುರಿತ ಅಂತಿಮ ವರದಿ ನೀಡಲು ಸಂಬಂಧಿತ ಸಂಸ್ಥೆಗೆ ನಿರ್ದೇಶಿಸಬೇಕೆಂದು ಗೀತಾ ನ್ಯಾಯಪೀಠದ ಮೊರೆ ಹೋಗಿದ್ದರು.

ಶಶಿಕಲಾ ಹಾಗೂ ಇಳವರಸಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ಆರೋಪದ ತನಿಖೆ ನಂತರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಸಲ್ಲಿಸಿದ್ದ ಸಮಗ್ರ ವರದಿಯೊಂದನ್ನು ಅರ್ಜಿದಾರರು ಕೋರಿದಲ್ಲದೇ, ಈವರೆಗೂ ವಿಚಾರಣೆ ಕುರಿತ ಅಂತಿಮ ವರದಿ ನೀಡಿಲ್ಲ ಎಂದು ಹೇಳಿದ್ದರು.

ತದನಂತರ ಈ ಆರೋಪಗಳಿಗೆ ಸಂಬಂಧಿಸಿದಂತೆ ಎಸಿಬಿ 2018ರಲ್ಲಿ ಎಫ್ ಐಆರ್ ದಾಖಲಿಸಿರುವುದಾಗಿ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ