NEWSನಮ್ಮರಾಜ್ಯಶಿಕ್ಷಣ-

ರಾಜ್ಯಾದ್ಯಂತ ಫೀಸ್ ಇಳಿಸಿ – ಮಕ್ಕಳ ಭವಿಷ್ಯ ಉಳಿಸಿ ಅಭಿಯಾನಕ್ಕೆ ಎಎಪಿ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರ ಕುಲಗೆಟ್ಟು ಹೋಗುತ್ತಿದ್ದು ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಮಕ್ಕಳ ಭವಿಷ್ಯ ಅಪಾಯದಲ್ಲಿದೆ. ಕೊರೊನಾ ಸೋಂಕಿನ ಮಧ್ಯೆ ಪಾಲಕರು ಮಕ್ಕಳ ಫೀಸ್ ಭರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ನಡೆಸುತ್ತಿರುವ “ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ” ರಾಜ್ಯ ವ್ಯಾಪಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಪಾಲಕರು ಮಕ್ಕಳ ಫೀಸ್ ಭರಿಸಲಾಗದೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೆ ಒಳಗಾಗಿದ್ದಾರೆ. ತಮ್ಮ ಉಳಿತಾಯದ ಹಣ, ಚಿನ್ನ ಎಲ್ಲವನ್ನೂ ಅಡಮಾನ ಇಟ್ಟು ಹಣ ಹೊಂದಿಸಿ ಫೀಸ್ ತುಂಬುತ್ತಿದ್ದಾರೆ ಎಂದರು.

ಇನ್ನುಶಾಲೆಗಳು ಫೀಸ್ ಭರಿಸಲಾಗದ ಮಕ್ಕಳನ್ನು ಆನ್ಲೈನ್ ತರಗತಿಗಳಿಗೆ ಸೇರಿಸುತ್ತಿಲ್ಲ. ಜನತೆಯ ಜೀವ ಉಳಿಸಬೇಕಾದ ಸರಕಾರ ಖಾಸಗಿ ಶಾಲೆಗಳ ಜೊತೆಗೆ ಕೈಜೋಡಿಸಿ ಪೋಷಕರ ಪ್ರಾಣ ಹಿಂಡುತ್ತಿದೆ. ಜನತೆಯ ಕಷ್ಟ ಆಲಿಸಲು ಆಗದ ತಾಳ್ಮೆ ಇಲ್ಲದ ಶಿಕ್ಷಣ ಸಚಿವರು ರಾಜೀನಾಮೆ ಕೊಟ್ಟು ಮನೆಗೆ ನಡೆಯಲಿ ಎಂದು ಕಿಡಿಕಾರಿದರು.

ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಸರಕಾರಕ್ಕೆ ಕಣ್ಣಲ್ಲಿ ನೆತ್ತರಿಲ್ಲ. ಪೋಷಕರ ಕಷ್ಟಗಳು ಕಾಣುತ್ತಿಲ್ಲ. ಹೀಗೆ ಮುಂದುವರಿದರೆ ರಾಜ್ಯದ ಶಿಕ್ಷಣ ಕ್ಷೇತ್ರದ ಭವಿಷ್ಯ ನೆಲಕ್ಕಚ್ಚಲಿದೆ. ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳ ಫೀಸ್ ಬಗ್ಗೆ ಮೌನವಾಗಿದ್ದಾರೆ. ಮಕ್ಕಳ ಕಷ್ಟಕ್ಕೆ ಬಾರದ ಶಿಕ್ಷಣ ಸಚಿವ ಇದ್ದು ಫಲವೇನು? ತಕ್ಷಣ ರಾಜೀನಾಮೆ ನೀಡಿ ಮನೆಗೆ ನಡೆಯಲಿ ಎಂದು ಆಗ್ರಹಿಸಿದರು.

ಅಭಿಯಾನದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು. ನೂರಾರು ಪೋಷಕರು ಮತ್ತು ಆಮ್ ಆದ್ಮಿ ಪಾರ್ಟಿಯ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಅಭಿಯಾನವನ್ನು ಬೆಂಬಲಿಸಿ 7669100500 ಸಂಖ್ಯೆಗೆ ಮಿಸ್ಡ್ ಕಾಲ್ ನೀಡಲು ಕರೆ ನೀಡಲಾಯಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...