NEWSನಮ್ಮರಾಜ್ಯರಾಜಕೀಯ

ಜಾತಿ ಜನಗಣತಿಯಿಂದ ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿ 10 ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ ವಾಗಲಿದೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟು ಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ಪ್ರತಿಪಾದಿಸಿದರು.

ಸ್ವಾತಂತ್ರ್ಯ ನಂತರ ಎಲ್ಲ ಜಾತಿ, ವರ್ಗಗಳಿಗೂಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ  180 ಕೋಟಿ ರೂ. ಖರ್ಚುಮಾಡಿಸಿ ಜಾತಿ ಜನಗಣತಿಮಾಡಿಸಿದ್ದೇನೆ. ಬಿಹಾರಮುಖ್ಯ ಮಂತ್ರಿ ನಿತಿಶ್ ಕುಮಾರ್ ಅವರೂ ಪ್ರಧಾನಿಮೋದಿ ಅವರ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿ ದ್ದಾರೆ ಎಂದರು.

ಪ್ರ ತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಯುವ ರೀತಿಯಲ್ಲೇ ಜಾತಿಗಣತಿ ನಡೆದರೆ ಒಳ್ಳೆಯದು. ಜಾತಿ ಜನಗಣತಿ ಅನುಷ್ಠಾನದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ಹೋರಾಟಮಾಡುತ್ತೇವೆ. ಧ್ವನಿ ಎತ್ತುತ್ತೇ ವೆ ಎಂದರು.

ಜಿಟಿಡಿ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ: ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆದಿದ್ದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡ ನನ್ನ ಜತೆಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆಗೂ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಈ ವಿಚಾರದಲ್ಲಿ ಸದ್ಯ ಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕಮುಂದಿನ ಬೆಳವಣಿಗೆ ತಿಳಿಸುತ್ತೇ ನೆ ಎಂದರು.

ಮೈಸೂರು ಪಾಲಿಕೆ ಬಿಜೆಪಿ ವಶವಾದ ಕುರಿತು ಪ್ರಸ್ತಾಪಿಸಿದ ಅವರು, ‘ಜೆಡಿಎಸ್ ಒಪ್ಪಂ ದದ ಪ್ರಕಾರ ನಡೆದುಕೊಳ್ಳಲಿಲ್ಲ . ಹೀಗಾಗಿಮೂರು ಪಕ್ಷದವರು ಮೇಯರ್ ಅಭ್ಯ ರ್ಥಿಯನ್ನು ಕಣಕ್ಕಿ ಳಿಸಿದರು. ಅತಿ ಹೆಚ್ಚು ಮತಗಳು ಬಿಜೆಪಿಗೆ ಬಿದ್ದಿ ದ್ದ ರಿಂದ ಅವರಿಗೆ ಮೇಯರ್ ಸ್ಥಾನಹೋಗಿದೆ’ ಎಂದರು.

ಮೆಟ್ರೋ ಅಧಿಕಾರಿಗಳು ಕನ್ನಡವನ್ನು ನಿರ್ಲಕ್ಷಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ ಇರಬೇಕು. ಕೇಂದ್ರ ಸಚಿವರು ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಭಾಷಣಮಾಡಿದರೆ ತಪ್ಪಲ್ಲ . ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಇದನ್ನು ನಾನು ಖಂಡಿಸುತ್ತೇ ನೆ’ ಎಂದರು.

ಕೋವಿಡ್ಮೂರನೇ ಅಲೆ ಆತಂಕದಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಚರ್ಚಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಕೋವಿಡ್ ನಿಯಂತ್ರ ಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು.

ಗಣೇಶ ಹಬ್ಬವನ್ನು ಕೂಡಾ ಸಂಭ್ರಮದಿಂದ ಆಚರಿಸಬೇಕು. ಆದರೆ ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆಮಾಡದಂತೆ ಸರ್ಕಾರ ಎಚ್ಚ ರಿಕೆ ವಹಿಸಬೇಕು’ ಎಂದು ಹೇಳಿದರು.

ಜನಾಶೀರ್ವಾದಯಾತ್ರೆ ಗೆ ಸಹಸ್ರಾರುಮಂದಿಯನ್ನು ಸೇರಿಸಿ ಕೇಂದ್ರ ಸಚಿವರು ಮತ್ತು ಬಿಜೆಪಿ ಕೋವಿಡ್ ನಿಯಮ ಉಲ್ಲಂಘಿಸಿದ್ದನ್ನು ತೀವ್ರವಾಗಿ ಖಂಡಿಸಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಫ್ಯೂ ಸ್ಹೋಗಿದೆ ಎನ್ನುವ ಬಿಜೆಪಿಮುಖಂಡ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ವಿಧಾನಸಭಾ ಚುನಾವಣೆ ಬರಲಿ.

ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ. ನಾಲಗೆಗೂ ಮತ್ತು ಮೆದುಳಿಗೂ ಸಂಪರ್ಕವೇ ಕಟ್ ಆಗಿರುವ ಈಶ್ವ ರಪ್ಪ ರ ಹೇಳಿಕೆಗಳಿಗೆ ಮಹತ್ವ ನೀಡುವ ಅಗತ್ಯ ಇಲ್ಲ ಎಂದು ಕಿಡಿ ಕಾರಿದರು.

10 ದಿನಗಳ ಚಿಕಿತ್ಸೆ ಬಳಿಕ ಜಿಂದಾಲ್ ಪ್ರ ಕೃತಿ ಚಿಕಿತ್ಸಾ ಕೇಂದ್ರ ದಿಂದ ಇಂದು ವಾಪಾಸಾಗಿದ್ದೇ ನೆ. ಕೊರೊನಾಸೋಂಕಿಗೆ ಒಳಗಾದ ಬಳಿಕ ದೇಹದ ತೂಕ 3-4 ಕೆ.ಜಿ. ಹೆಚ್ಚಾ ಗಿತ್ತು . ಈಗಮೂರು ಕೆ.ಜಿ. ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು