Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ‌ ಸೆಲ್ : ಸಿಎಂ ಬಸವರಾಜ ಬೊಮ್ಮಾಯಿ

207Views
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕ.ಕ.ಪ್ರ.ಅ. ಮಂಡಳಿ) ಪ್ರತ್ಯೇಕ‌ ಸೆಲ್ ಅನ್ನು ಕಲಬುರಗಿಯಲ್ಲಿ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

74ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ ನಗರದ ಡಿ.ಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ, ಬಳಿಕ ಸರ್ಧಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಕೆಕೆಆರ್​ಡಿಬಿಗೆ ಕಾಯಂ‌ ಕಾರ್ಯದರ್ಶಿ ನೇಮಕ ಮಾಡುತ್ತೇವೆ. ಈ ಮೂಲಕ ನಮ್ಮ ಚಿಂತನೆ ಮತ್ತು ಕಾರ್ಯ ಯೋಜನೆಯಲ್ಲಿ ಬದಲಾವಣೆಯನ್ನು ತರಲಿದ್ದೇವೆ. ಸ್ವಲ್ಪ ಸಮಯ ಕೊಡಿ. ಅಮುಲಾಗ್ರ ಬದಲಾವಣೆ ತರುವ ಕೆಲಸ ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೆಕೆಆರ್​ಡಿಬಿಗೆ ನೀಡಿರುವ ಹಣ ಖರ್ಚು ಮಾಡಿ ತೋರಿಸಿ. ಹಣ ಖರ್ಚು ತೋರಿಸಿದರೆ ಮತ್ತೆ 1500 ಕೋಟಿ ರೂ. ಕೊಡಲು ಸಿದ್ಧನಿದ್ದೇನೆ. ಒಟ್ಟು ಮೂರು ಸಾವಿರ ಕೋಟಿ ಹಣವನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುತ್ತೇನೆ. ಜನರ ಸುತ್ತ ಅಭಿವೃದ್ಧಿಯಾಗಬೇಕೇ ವಿನಾ ಅಭಿವೃದ್ಧಿ ಸುತ್ತ ಜನ ಓಡಾಡಬಾರದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಕೆಕೆಆರ್‌ಡಿಬಿ ಮತ್ತು ನಂಜುಂಡಪ್ಪ ವರದಿಯನ್ನು ಹೊಸ ರೂಪದಲ್ಲಿ ವಿಸ್ತರಣೆ ಮಾಡುತ್ತೇವೆ. ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಾನೇ ನಡೆಸುತ್ತೇನೆ. ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿರುವ ಸಿಮೆಂಟ್ ಪ್ಯಾಕ್ಟರಿಯವರು ನಿರೀಕ್ಷೆಗೆ ತಕ್ಕಂತೆ ಸಹಾಯ ಮಾಡಿಲ್ಲ ಎಂದು ಸಿಎಂ ಹೇಳಿದರು.

ಕಕ ಅಭಿವೃದ್ಧಿಯಾಗಿದ್ದರೆ ಬಿಎಸ್‌ವೈ ಕಾರಣ: ಬೊಮ್ಮಾಯಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿದ್ದರೆ ಯಡಿಯೂರಪ್ಪನವರು ಕಾರಣ. ಈ ಭಾಗದ ಮೇಲೆ ಯಡಿಯೂರಪ್ಪನವರಿಗೆ ಹೆಚ್ಚಿನ ಪ್ರೀತಿ ಇತ್ತು.

ಅಲ್ಲದೇ ಕಲ್ಯಾಣ ಕರ್ನಾಟಕ ಮತ್ತು ಮೋದಿ ಅವರಿಗೆ ಸಂಬಂಧವಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ಪ್ರಧಾನಿ ಮೋದಿ ಅವರ ಜನ್ಮದಿನ ಕೂಡಾ ಹೌದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಳಿಕ ಕೊರೊನಾ ಲಸಿಕೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂದು ಮೂವತ್ತು ಲಕ್ಷ ವ್ಯಾಕ್ಸಿನ್ ನೀಡಲಾಗುತ್ತಿದೆ. ನವಭಾರತಕ್ಕಾಗಿ ನವ ಕರ್ನಾಟಕ, ನವ ಕರ್ನಾಟಕಕ್ಕೆ ನವ ಕಲ್ಯಾಣ ಮಾಡಲಾಗುವುದು ಎಂದು ಹೇಳಿದರು.

ನಂತರ ಸರ್ದಾರ್ ಪಟೇಲರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ದಾರ್ ಪಟೇಲರ ಇಚ್ಛಾಶಕ್ತಿ, ಶ್ರಮದಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಕರ್ನಾಟಕ ಏಕೀಕರಣದಲ್ಲಿ ಹಿರಿಯರ ಪಾತ್ರ ದೊಡ್ಡದಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಸ್ಥಾನಮಾನ 371(ಜೆ) ನೀಡಲಾಗಿದೆ ಎಂದು ಹೇಳಿದರು.

Editordev
the authorEditordev

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...