NEWSನಮ್ಮರಾಜ್ಯ

ಬಿಎಂಟಿಸಿ ಎಂಡಿ ಶಿಖಾ ಸೇರಿ ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಸಿ. ಶಿಖಾ, ಅಜಯ್ ನಾಗಭೂಷಣ್, ಸಲ್ಮಾ ಫಾಹಿಮಾ, ಕಣಗವಲ್ಲಿ, ರಘುನಂದನ್ ಮೂರ್ತಿ, ಎಂ.ಎಸ್. ಅರ್ಚನಾ, ರಮ್ಯಾ ಸೇರಿ ಒಟ್ಟು ಏಳು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದು, ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗ ಮಾಡಲಾಗಿದೆ. ಸಲ್ಮಾ ಫಾಹಿಮಾ ಅವರನ್ನು ಬೆಂಗಳೂರು ಹೆಚ್ಚುವರಿ ಕಾರ್ಯದರ್ಶಿ, ಮೂಲಸೌಕರ್ಯಕ್ಕೆ ನಿಯೋಜಿಸಲಾಗಿದೆ.

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕಣಗವಲ್ಲಿ, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ರಘುನಂದನ್ ಮೂರ್ತಿ, ಕೆಇಟಿ ಬೆಂಗಳೂರು ಸದಸ್ಯರಾಗಿ ಎಂ.ಎಸ್. ಅರ್ಚನಾ ಹಾಗೂ ಪರೀಕ್ಷಾ ಪ್ರಾಧಿಕಾರಕ್ಕೆ ಕಾರ್ಯಕಾರಿ ನಿರ್ದೇಶಕರಾಗಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ