NEWSನಮ್ಮರಾಜ್ಯರಾಜಕೀಯ

ರಾಷ್ಟ್ರ ರಾಜಕಾರಣದ ಬಗ್ಗೆ ಸಿದ್ದರಾಮಯ್ಯಗೆ ಪುಕ್ಕಲುತನವಿದೆ: ಎಚ್‌.ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದ ಬಗ್ಗೆ ಪುಕ್ಕಲುತನವಿದೆ. ಆದ್ದರಿಂದಲೇ ರಾಷ್ಟ್ರ ಮಟ್ಟದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಲು ಹಿಂಜರಿಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

ಸೋಮವಾರ ಮೈಸೂರು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ದೇವೇಗೌಡ ಅವರು ದೇಶದ ಪ್ರಧಾನಿಯಾದರು. ಮೂರು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರಧಾನಿಯಾದರು. ಪ್ರಧಾನಿ ಹುದ್ದೆ ಎನ್ನುವುದು ರಾಷ್ಟ್ರದ ಕಾರ್ಯಾಂಗದ ಅತ್ಯುನ್ನತ ಹುದ್ದೆ ಎಂದರು.

ಪ್ರಧಾನಿ ಅಭ್ಯರ್ಥಿ ಮಾಡುವುದಾದರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಕಾಂಗ್ರೆಸ್ ವರಿಷ್ಠರಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ಹೇಳಲಿಲ್ಲ. ದೇವೇಗೌಡರು, ನರೇಂದ್ರ ಮೋದಿ ಪ್ರದರ್ಶಿಸಿದ ಧೈರ್ಯ ಸಿದ್ದರಾಮಯ್ಯ ಅವರಿಗೆ ಇಲ್ಲ. ಮತ್ತೇಕೆ ಪ್ರಧಾನಿ ಮೋದಿ ಅವರ ವಿರುದ್ಧ ಟೀಕೆ ಮಾಡಬೇಕು ಎಂದು ಪ್ರಶ್ನಿಸಿದರು.

ದೇವೇಗೌಡರು ಪ್ರಧಾನಿಮಂತ್ರಿಯಾದ ಸಂದರ್ಭದಲ್ಲಿ ತಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಆದರೂ ಕನ್ನಡಿಗರೊಬ್ಬರು ಪ್ರಧಾನಿಯಾದರು ಎಂದು ಎಲ್ಲರಿಗೂ ಸಿಹಿ ಹಂಚಿದ್ದೆ. ಇದರಲ್ಲಿ ಅಸೂಯೆ ಪಡುವಂಥದ್ದು ಇಲ್ಲ. ಕನ್ನಡಿಗರು ಪ್ರಧಾನಿಯಾಗೋದು ಹೆಮ್ಮೆಯ ವಿಚಾರ ಎಂದು ಸ್ಮರಿಸಿದರು.

‘ಯಡಿಯೂರಪ್ಪ ಮುಖ್ಯ ಮಂತ್ರಿಯಿದ್ದಾಗ ನಿತ್ಯವೂ ಭ್ರಷ್ಟ ಎಂದು ವಾಗ್ದಾಳಿ ನಡೆಸುತ್ತಿದ್ದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾ ಮಿ; ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಇದರಲ್ಲೇನೋ ರಾಜಕೀಯ ವಾಸನೆ ಇದೆ.

ವಿಜಯೇಂದ್ರ , ಯಡಿಯೂರಪ್ಪ ಹಣಿಯುವ ತಂತ್ರಗಾರಿಕೆ ನಡೆದಿದೆ ಎನ್ನುತ್ತಿರುವುದು ಬೂಟಾಟಿಕೆಯ ಹೇಳಿಕೆ. ನೀವಿಬ್ಬರೂ ಭ್ರಷ್ಟಾಚಾರದ ಪರವೋ? ವಿರುದ್ಧವೋ? ಎಂಬುದನ್ನು ಮೊದಲು ಸ್ಪ ಷ್ಟ ಪಡಿಸಿ’ ಎಂದು ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದರಲ್ಲಿ ಅರ್ಥವಿಲ್ಲ. ಇವರು ಮುಖ್ಯಮಂತ್ರಿಯಾಗಿದ್ದಾಗ 326 ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಅವರ ಸಚಿವ ಸಂಪುಟ ಆ ವಿಚಾರವನ್ನೇ ತಳ್ಳಿಹಾಕಿತು. ಈಗ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ನೀವು ಯಾರ ಪರ ಇದ್ದೀರಿ ಅಂತ ಸ್ಪಷ್ಟವಾಗಿ ಹೇಳಿ ಎಂದು ಒತ್ತಾಯಿಸಿದರು.

ಲೋಕಾಯುಕ್ತ ಶಕ್ತಿಗೊಳಿಸಿ: ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನಿಷ್ಕ್ರಿಯಗೊಳಿಸಿದ ಲೋಕಾಯುಕ್ತ ಸಂಸ್ಥೆ ಹಾಗೂ ಯಶಸ್ವಿನಿ ರೈತ ಆರೋಗ್ಯ ವಿಮೆಯನ್ನು ಮತ್ತೆ ಸದೃಢಗೊಳಿಸಿ ಎಂದು ವಿಶ್ವನಾಥ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.

ನಿಮ್ಮಪ್ಪ ಅಧಿಕಾರದಲ್ಲಿದ್ದಾಗ ರೂಪುಗೊಂಡ ಸಂಸ್ಥೆ ಲೋಕಾಯುಕ್ತ. ಈ ಸಂಸ್ಥೆಗೆ ಹಿಂದಿನ ಅಧಿಕಾರವನ್ನೇ ನೀಡಿ. ಭ್ರಷ್ಟರಿಗೆ ಕೊಂಚವಾದರೂ ಭಯವಿರಲಿ ಎಂದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...