NEWSನಮ್ಮರಾಜ್ಯರಾಜಕೀಯ

ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಸಿದ್ದರಾಮಯ್ಯರದು: ಡಿಸಿಎಂ ಕಾರಜೋಳ ತಿರುಗೇಟು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿತ್ತು. ಇನ್ನು ಈ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಾದ ನಡವಳಿಕೆ ಅಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದ್ದಾರೆ.

ಸುವರ್ಣಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಟೀಕೆಗೆ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು ಎಂಬುದನ್ನು ಮೊದಲು ಸಿದ್ದರಾಮಯ್ಯ ಹೇಳಲಿ. ಹಣಕಾಸು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ರಾಜ್ಯಕ್ಕೆ ಸಿಕ್ಕ ಈ ಎಲ್ಲ ಇಲಾಖೆಗಳು ಮಹತ್ವದಾಗಿವೆ ಎಂದು ತಿಳಿಸಿದರು.

ಇನ್ನು ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅವಕಾಶ ಸಿಕ್ಕಿದೆ. ಇದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ರಾಜ್ಯದಿಂದ ಆಯ್ಕೆಯಾದ ಸಂಸದರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಸಿಕ್ಕಿರುವುದು ಖುಷಿ ತಂದಿದೆ. ರಾಜ್ಯದ ಅಭಿವೃದ್ಧಿಗೆ ಇದು ಒಂದು ಭರವಸೆಯನ್ನು ಮೂಡಿಸಿದೆ ಎಂದು ಸಂತಸ ಹಂಚಿಕೊಂಡರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ