NEWSನಮ್ಮರಾಜ್ಯರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಪಾತ್ರವೇ ದೊಡ್ಡದು : ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಜೆಡಿಎಸ್–ಕಾಂಗ್ರೆಸ್ ಸಮ್ಮಿ ಶ್ರ ಸರ್ಕಾರ ಪಥನವಾಗಿ, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಸಿದ್ದರಾಮಯ್ಯ ಪಾತ್ರವೇ ದೊಡ್ಡದು ಎಂದುಮಾಜಿಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾ ಮಿ ಆರೋಪಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಬಿಜೆಪಿ ಸರ್ಕಾರ ರಚನೆ ವೇಳೆಮುಂಬೈಗೆ ಶಾಸಕರನ್ನು ಕಳಿಸಿದ್ದು ಇವರೇ ಅಲ್ಲವೇ? ಸಿದ್ದರಾಮಯ್ಯ –ಯಡಿಯೂರಪ್ಪ ಅವರ ನೈಜ ಸಂಬಂಧಹೊರ ಬಂದರೆ ಬಹಳಷ್ಟು ವಿಚಾರಗಳು ಬಹಿರಂಗವಾಗಲಿವೆ ಎಂದು ಹೇಳಿದರು.

ದೇವೇಗೌಡರು ಎಂದೂಸಹ ಬಿಜೆಪಿಜೊತೆ ಕೈಜೋಡಿಸಿಲ್ಲ . ದೇವೇಗೌಡರ ಜಾತ್ಯ ತೀತತೆ ಪ್ರಶ್ನಿಸುವ ನೈತಿಕತೆ ಸಿದ್ದರಾಮಯ್ಯ ಎಲ್ಲಿ ಉಳಿಸಿಕೊಂಡಿದ್ದಾರೆ? ಡಿಎಂಕೆ ಜೊತೆ ಸೇರಿ ಸರ್ಕಾರ ರಚನೆಮಾಡಿದ ನಿಮ್ಮದ್ಯಾವ ಜಾತ್ಯತೀತತೆ? ಶಿವಸೇನೆಜೊತೆ ಸೇರಿ ಸರ್ಕಾರ ರಚನೆಮಾಡಿರುವ ನಿಮ್ಮ ದುಯಾವ ಜಾತ್ಯತೀತತೆ ಸಿದ್ದರಾಮಯ್ಯ ನವರೇ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ನಡವಳಿಕೆಯಿಂದ ಜನರು ಕಾಂಗ್ರೆಸ್ನಿಂದ ದೂರಹೋಗುತ್ತಿದ್ದಾರೆ. ಇನ್ನು ಜಮೀರ್ ಅಹ್ಮದ್ ಬ್ಲ್ಯಾಕ್ಮೇಲ್ ಜೀವನಮಾಡುತ್ತಾರೆ. ಮರ್ಯಾದೆ ಇಲ್ಲದವರ ಜೊತೆಗೆ ನಾನು ಚರ್ಚೆ ಮಾಡಲ್ಲ. ಕೊಚ್ಚಯ ಮೇಲೆ ಕಲ್ಲು ಎಸೆದರೆ ನಮ್ಮ ಮೇಲೆ ಬೀಳುತ್ತದೆ ಎಂದರು.

ಸಿಂದಗಿ ಗೆಲ್ಲುತ್ತೇವೆ: ದೇವೇಗೌಡಮಾರ್ಗದರ್ಶನ, ಪರಿಶ್ರಮ, ಕಾರ್ಯಕರ್ತರ ಶ್ರಮದಿಂದಾಗಿ ಸಿಂದಗಿ ಉಪ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆಯುತ್ತೇ ವೆ ಎಂದು ಹೇಳಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?