NEWSನಮ್ಮರಾಜ್ಯರಾಜಕೀಯ

ಜುಲೈ ಅಥವಾ ಆಗಸ್ಟ್ ನಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಮುರುಗೇಶ್ ನಿರಾಣಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲಬುರಗಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಕಲ್ಯಾಣ ಕರ್ನಾಟಕದ ವಿಷಯಗಳ ಕುರಿತು ಚರ್ಚಿಸಲು ಜುಲೈ ಕೊನೆವಾರ ಅಥವಾ ಆಗಸ್ಟ್ ತಿಂಗಳಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ ಭರವಸೆ ನೀಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ವೇಳೆ ಮಾತನಾಡಿದ ಅವರು, ಸಂಪುಟ ಸಭೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೋರಲಾಗುವುದು ಎಂದರು.

ಜಿಲ್ಲೆಯ ಕುಡಿಯುವ ನೀರಿನ ವಿವಿಧ ಹಂತದ ಯೋಜನೆಗಳು, ನೀರಾವರಿ ಯೋಜನೆಗಳು, ರಸ್ತೆಗಳು ಮುಂತಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಇಂತಹ ಅಭಿವೃದ್ಧಿ ಯೋಜನೆಗಳಿಗೆ ಶೇ.100 ರಷ್ಟು ಸಂಪುಟ ಸಭೆಯಲ್ಲೇ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ವಿವಿಧ ಇಲಾಖೆಗಳ ಇಂತಹ ಯೋಜನೆಗಳ ಯೋಜನಾ ವಿಸ್ತೃತ ವರದಿ ( ಡಿಪಿಆರ್) ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ಸಚಿವರು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ