NEWSನಮ್ಮರಾಜ್ಯಶಿಕ್ಷಣ-

ಶಿಕ್ಷಕರು-ವಿದ್ಯಾರ್ಥಿಗಳ ಸಂಪರ್ಕ ಏರ್ಪಡಲೇಬೇಕಿದೆ : ಶಿಕ್ಷಣ ತಜ್ಞರ ಸಭೆಯಲ್ಲಿ ಒಮ್ಮತದ ಅಭಿಪ್ರಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಲೆಗಳಿಂದ ಮಕ್ಕಳನ್ನು ಬಹುಕಾಲ ದೂರ ಉಳಿಸುವುದು ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಒಳ್ಳೆಯದಲ್ಲ ಹೀಗಾಗಿ ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯ ಸಲಹೆ ಪಡೆದೇ ಮುಂದುವರಿಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆಯಿಂದ ಕೋವಿಡ್ ಹರಡಿದ ನಿದರ್ಶನವಿಲ್ಲ. ಸದ್ಯ ಶಾಲೆ ಆರಂಭಿಸದೇ ಇದ್ದರೂ ಯಾವುದಾದರೂ ರೂಪದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಪರ್ಕ ಏರ್ಪಡಲೇಬೇಕಿದೆ ಎಂಬ ಅಭಿಪ್ರಾಯ ಶುಕ್ರವಾರ ತಮ್ಮ ನೇತೃತ್ವದಲ್ಲಿ ನಡೆಸಿದ ವಿವಿಧ ಶಿಕ್ಷಣ ತಜ್ಞರು, ಶಿಕ್ಷಣ ಕುರಿತ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ವ್ಯಕ್ತವಾಯಿತು ಎಂದು ವಿವರಿಸಿದರು.

ಲಾಕ್‍ಡೌನ್ ಅನ್‍ಲಾಕ್ ಮಾಡಿದಂತೆ ವಿಕೇಂದ್ರೀಕರಣ ರೂಪದಲ್ಲಿ ಶಾಲೆಗಳನ್ನು ತೆರೆಯುವ ಕುರಿತೂ ಸಲಹೆಗಳು ವ್ಯಕ್ತವಾಗಿವೆ. ಶಾಲಾರಂಭದ ವಿಷಯದಲ್ಲಿ ಎಲ್ಲ ಕಡೆಯೂ ಒಂದೇ ಬಾರಿಗೆ ಶಾಲೆ ತೆರೆಯದಿದ್ದರೂ ತೊಂದರೆಯೇನೂ ಇಲ್ಲ. ತಾಲೂಕು, ಗ್ರಾಮಪಂಚಾಯಿತಿ ಇಲ್ಲವೇ ಜಿಲ್ಲಾ ಹಾಗೆಯೇ ಗ್ರಾಮೀಣ ಪ್ರದೇಶ, ನಗರ ಪ್ರದೇಶ ಹೋಬಳಿ, ತಾಲೂಕು ಕೇಂದ್ರವಾರು ತರಗತಿ ಆರಂಭಿಸುವ, ಇಲ್ಲವೇ ಇತರ ರೂಪದಲ್ಲಿ ಮಕ್ಕಳನ್ನು ಉಪಾಧ್ಯಾಯರು ತಲುಪುವ ವಿಷಯಗಳ ಕುರಿತೂ ಪ್ರತಿನಿಧಿಗಳಿಂದ ವಿವಿಧ ಸಲಹೆ ದೊರೆತಿದೆ ಎಂದು ತಿಳಿಸಿದರು.

ವಿಶೇಷವಾಗಿ ಡಾ. ದೇವಿಶೆಟ್ಟಿ ವರದಿಯಂತೆ ತರಗತಿವಾರು, ಆಯಾ ಪ್ರದೇಶದ ಪಾಸಿಟಿವಿಟಿ ದರದ ಅನ್ವಯ ಶಾಲಾ ತರಗತಿಗಳನ್ನು ತೆರೆಯುವುದಾಗಲಿ ಇಲ್ಲವೇ ಶಾಲಾವರಣದಲ್ಲಿ ವಿದ್ಯಾಗಮ ತರಗತಿಗಳನ್ನು ನಡೆಸುವುದರ ಕುರಿತು ಆದ್ಯತೆ ನೀಡಬೇಕೆಂಬುದು ಬಹುತೇಕರ ಸಲಹೆಯಾಗಿದ್ದು, ಸದ್ಯದಲ್ಲೇ ಟಾಸ್ಕ್​ಫೋರ್ಸ್ ರಚಿಸಿ ಒಂದು ತೀ‌ರ್ಮಾನಕ್ಕೂ ಬರಲಾಗುವುದು ಎಂದೂ ತಿಳಿಸಿದರು.‌

ಶಾಲಾರಂಭವನ್ನು ಆಯಾ ಪ್ರದೇಶವಾರು ಕೋವಿಡ್ ಕನಿಷ್ಠ ಪಾಸಿಟಿವಿಟಿ ಆಧಾರದಲ್ಲಿ ತೆರೆಯಬಹುದೆಂಬ ಡಾ. ದೇವಿಶೆಟ್ಟಿ ವರದಿಯ ಅಂಶಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕೋವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಬಗ್ಗೆಯೂ ಭಿಪ್ರಾಯ ವ್ಯಕ್ತವಾಯಿತು ಎಂದರು.

ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ನೀಡಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದು ಎಂದು ತಿಳಿಸಿದರು.

ಆನ್-ಲೈನ್ ದೂರದರ್ಶನ ಚಂದನಾ ಮೂಲಕ ಸಂವೇದಾ ಪಾಠಗಳು, ಯೂ-ಟ್ಯೂಬ್, ವಾಟ್ಸ್​ಆಪ್ ಮೂಲಕ ಹಾಗೆಯೇ ಮಕ್ಕಳು ವಾರದಲ್ಲಿ ಒಂದು ದಿನ ಶಾಲೆಗೆ ಬಂದು ಸಿದ್ಧಪಾಠಗಳನ್ನು ತೆಗೆದುಕೊಂಡು ಹೋಗಿ ಇನ್ನೊಂದು ದಿನ ಅವುಗಳೊಂದಿಗೆ ಬಂದು ಸಂಶಯಗಳ ನಿವಾರಣೆಗೆ ಶಿಕ್ಷಕರನ್ನು ಭೇಟಿ ಮಾಡುವಂತಹುದು, ಶಾಲೆಗೆ ಬರಲಾಗದ ಮಕ್ಕಳಿಗೆ ಆಯಾ ಗ್ರಾಮಪಂಚಾಯಿತಿ ಅಧಿಕಾರಿಗಳ ಇಲ್ಲವೇ ಸ್ವಯಂ ಸೇವಕರ ಮೂಲಕ ಸಿದ್ಧಪಠ್ಯಗಳನ್ನು ನೀಡುವಂತಹ ಸಲಹೆಗಳೂ ವ್ಯಕ್ತವಾದವು ಎಂದು ವಿವರಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...