NEWSನಮ್ಮರಾಜ್ಯಶಿಕ್ಷಣ-

ಸಮಯಕ್ಕೆ ಸರಿಯಾಗಿ ಪಾಠ ಪೂರ್ಣಗೊಳಿಸಲು ಶಿಕ್ಷಕರ ರಜೆ ಕಡಿತಕ್ಕೆ ಯೋಚನೆ: ಶಿಕ್ಷಣ ಸಚಿವ ನಾಗೇಶ್

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕೊರೊನಾ ಸೋಂಕಿನಿಂದ ಮಕ್ಕಳು ಒಂದೂವರೆ ವರ್ಷದಿಂದ ಶಾಲೆಗೆ ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ ಶಿಕ್ಷಕರ ರಜೆ ಕಡಿಮೆ ಮಾಡಿ ಸಮಯಕ್ಕೆ ಸರಿಯಾಗಿ ಪಾಠ ಪೂರ್ಣಗೊಲೀಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ವರ್ಷವೂ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಆ ಬಗ್ಗೆ ಇನ್ನು ಯಾವ ನಿರ್ಣಯ ಕೈಗೊಂಡಿಲ್ಲ. ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸಬೇಕಿದೆ ಎಂದು ತಿಳಿಸಿದರು.

ಸಿಲಬಸ್ ಪೂರ್ಣಗೊಳಿಸುವ ಕುರಿತು ಯೋಚನೆಯಿದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಹಕಾರ ನೋಡಿ, ಅವಶ್ಯಕತೆ ಬಿದ್ದರೆ ನಿರ್ಣಯ ಕೈಗೊಳ್ಳುತ್ತೇ ವೆ ಎಂದು ಹೇಳಿದರು.

1 ರಿಂದ 5 ನೇ ತರಗತಿಯವರೆಗೆ ಶಾಲೆ ಆರಂಭಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಾಂತ್ರಿಕ ಸಭೆ ಸದ್ಯದಲ್ಲಿಯೇ ಮಾಡುತ್ತಿದ್ದೇ ವೆ. 6,7,8 ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ.

ಆ ರೀತಿ ನೋಡಿ ತುಂಬ ಸಂತೋಷವಾಗಿದೆ. ಖಂಡಿತ ಸದ್ಯದಲ್ಲೇ 1 ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿ, ಸಮಿತಿ ಅನುಮತಿ ನೀಡಿದ ಬಳಿಕ ಆರಂಭಿಸುತ್ತೇ ವೆ ಎಂದರು.

ಕೇರಳದಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆಯಾಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕೋವಿಡ್ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕೋವಿಡ್ ಹೆಚ್ಚಾದ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತೇ ವೆ ಎಂದು ಸಚಿವರು ಹೇಳಿದರು.

ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಧ್ಯಾಪಕರು ಏಕೆ ಈ ರೀತಿ ವರ್ಗಾವಣೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ನನೆಗುದಿಗೆ ಬಿದ್ದಿದೆ.

ಮೂರು ವರ್ಷದಿಂದ ಸತತವಾ ಗಿ ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಅಪೀಲ್ ಹೋಗುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ. ತೆರವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...