NEWSಸಂಸ್ಕೃತಿ

ಅನ್ಯಭಾಷಿಕರಿಗೆ ಕನ್ನಡ ಕಲಿಸಿ: ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟ: ಸುಲಿದ ಬಾಳೆ ಹಣ್ಣಿನಂತೆಯಿರುವ ನಮ್ಮ ಕನ್ನಡ ಭಾಷೆಯನ್ನು ತೆಲುಗು, ತಮಿಳು, ಮರಾಠಿ ಸೇರಿದಂತೆ ವಿವಿಧ ಭಾಷಿಕರಿಗೆ ಕನ್ನಡ ಕಲಿಸುವ ಕಾರ್ಯವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

ನವನಗರದ ಕಲಾಭವನದ ಆವರಣದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನಡಿಯಲ್ಲಿ ಕನ್ನಡಕ್ಕಾಗಿ ನಾವು ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉದ್ಯೋಗಕ್ಕಾಗಿ ನಮ್ಮ ಕನ್ನಡ ಭಾಷಿಕರು ಅನ್ಯ ರಾಜ್ಯ ಹಾಗೂ ದೇಶಗಳಿಗೆ ಹೋದಾಗ ಅಲ್ಲಿಯ ಭಾಷೆಯನ್ನು ಬಹುಬೇಗ ಕಲಿಯುತ್ತಾರೆ. ಆದರೆ ನಮ್ಮ ಕನ್ನಡ ಭಾಷೆ ಪಸರಿಸಿ ಬೆಳೆಸಬೇಕೆಂಬ ಕಾರ್ಯ ಮಾಡುತ್ತಿಲ್ಲವೆಂದರು.

ನೇರೆ ರಾಜ್ಯಗಳಾದ ತಮಿಳು,ಆಂಧ್ರ ಹಾಗೂ ಮಹಾರಾಷ್ಟ್ರ ತಮ್ಮ ಮಾತೃ ಭಾಷೆಯನ್ನು ಹಿಡಿತದಲ್ಲಿ ಇಟ್ಟುಕೊಂಡು ಅಲ್ಪ ಸ್ವಲ್ಪ ಕನ್ನಡ ಬರುತ್ತಿದ್ದರು ನಮ್ಮ ರಾಜ್ಯಕ್ಕೆ ಬಂದಾಗ ತಮ್ಮ ಭಾಷೆಯನ್ನೆ ಬಳಸುತ್ತಾರೆ. ಇದನ್ನು ಕನ್ನಡಿಗರಾದ ನಾವು ಗಮನಿಸಿ ಇಂತಹ ಅಭಿಯಾನುಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡಿಗರಲ್ಲಿ ಕನ್ನಡ ಬೆಳೆಸುವ ಕಾರ್ಯ ಮಾಡಬೇಕು. ಇಂದು ದೃಶ್ಯ ಮಾಧ್ಯಮದ ಮೂಲಕ ಪ್ರಾರಂಭಗೊಂಡ ಈ ಅಭಿಯಾನ ಇನ್ನೂ ಹಲವು ಕಾರ್ಯಕ್ರಮಗಳೊಂದಿಗೆ ಕನ್ನಡಿರಲ್ಲಿ ಜಾಗೃತ ಮೂಡಿಸಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಲತಾ ಎನ್. ಮಾತನಾಡುತ್ತಾ ಈ ಬಾರಿ 66 ನೇ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗುತ್ತಿದ್ದು ಅದರ ಅಂಗವಾಗಿ 66 ಅಡಿ ಕ್ಯಾನ್ವಸ್‍ನಲ್ಲಿ ಕನ್ನಡ ನಾಡು ನುಡಿಗಾಗಿ ಸಂಬಂಧಿಸಿದ ಕಲಾಕೃತಿಗನ್ನು ಆಸಕ್ತ ಮತ್ತು ಪ್ರತಿಭಾನ್ವಿತ ಕಲಾವಿದರ ಮೂಲಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಮಹೇಶ ಬಂಡಿ, ಲಲಿತಾ ಕಲಾ ಅಕಾಡೆಮಿಯ ಸದಸ್ಯ ವಿರೇಶ ರುದ್ರಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು