ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಸ್ಥಳವನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ತನಕ ಸಮಾಧಿ ಸ್ಥಳದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆ ಬುಧವಾರ (ನ.3) ಬೆಳಗ್ಗೆಯಿಂದಲೇ ಸಹಸ್ರಾರು ಪುನೀತ್ ಅಭಿಮಾನಿಗಳು ಅಪ್ಪುವಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.
ಇನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ನವೆಂಬರ್ 16 ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್‌ನ ನಟ ನಟಿಯರನ್ನು ಸಭೆಗೆ ಆಹ್ವಾನಿಸಲಾಗುತ್ತಿದೆ.
ಸಿಲಿಕಾನ್ ಸಿಟಿ, ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರ ಹಾಗೂ ಗ್ರಾಮಗಳಲ್ಲಿ ವೃತ್ತ ಹಾಗೂ ರಸ್ತೆಗಳಿಗೆ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡಲಾಗುತ್ತಿದೆ.
ವೃತ್ತಗಳಲ್ಲಿ ಪುನೀತ್ ರಾಜ್ ಕುಮಾರ್ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಶಿಲ್ಪ ಕಲಾವಿದರಿಗೆ ಆರ್ಡರ್ ನೀಡಲಾಗುತ್ತಿದೆ. ಇದರಿಂದ ಬೆಂಗಳೂರಿನ ಹಲವು ಶಿಲ್ಪ ಕಲಾವಿದರು ಅಪ್ಪುವಿನ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ತೊಡಗುತ್ತಿದ್ದಾರೆ.