NEWSನಮ್ಮರಾಜ್ಯರಾಜಕೀಯ

ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಹೆಚ್ಚಿನ ಬಹುಮತದಿಂದ ಬಿಜೆಪಿ ಗೆಲ್ಲಲಿದೆ: ಸಿಎಂ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಿಂದಗಿ ಹಾಗೂ ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‍ಗೆ ವಾಪಾಸ್ ಆಗ್ತೇನೆ ಎಂದು ತಿಳಿಸಿದರು.

ಇನ್ನು ಮೂರು ದಿನಗಳು ಹಾನಗಲ್‌ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ. ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅದರ ಬಗ್ಗೆ ಇನ್ನು ಯಾವುದೇ ತೀರ್ಮಾನ ಮಾಡಿಲ್ಲ. ಕೋವಿಡ್ ಕಡಿಮೆಯಾದ ಹಿನ್ನೆಲೆ ಮೆರವಣಿಗೆ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ತೀರ್ಮಾನ ತಗೆದುಕೊಳ್ಳಲಾಗುವುದು. ಈ ಕುರಿತು ತಜ್ಞರ ಜತೆಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ವೇಳೆ ಕಿತ್ತೂರು ಕರ್ನಾಟಕ ಘೋಷಣೆ ಮಾಡುವ ವಿಚಾರ ಸಂಬಂಧದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ಅವರು, ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಬೇಕು ಚರ್ಚಿಸಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...