NEWSನಮ್ಮರಾಜ್ಯರಾಜಕೀಯ

ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಚುನಾವಣೆ ಮುಂದೂಡಿಕೆಗೆ ಕಾರಣ: ಎಎಪಿ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಜನತೆಗೆ ಲಸಿಕೆ ನೀಡಲು ಸರ್ಕಾರ ನಿರ್ಲಕ್ಷ್ಯ ತೋರಿರುವುದೇ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಮುಂದೂಡಲು ಕಾರಣ ಎಂದು ಆಮ್‌ ಆದ್ಮಿ ಪಾರ್ಟಿ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜ್ಯ ಉಪಸಂಚಾಲಕಿ ಶಾಂತಲಾ ದಾಮ್ಲೆರವರು, “ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುವುದೇ ಚುನಾವಣೆಗಳಿಂದ. ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳನ್ನು ಮುಂದೂಡಿದ್ದರಿಂದ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ.

ಸರ್ಕಾರವು ಸರಿಯಾಗಿ ಕೋವಿಡ್‌ ಲಸಿಕೆ ನೀಡಿದ್ದರೆ ಇಂದು ಚುನಾವಣೆಯನ್ನು ಮುಂದೂಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಅಧಿಕಾರ ಉಳಿಸಿಕೊಳ್ಳಲು, ಕುರ್ಚಿಗಾಗಿ ಲಾಬಿ ಮಾಡಲು ಪದೇಪದೇ ದೆಹಲಿಗೆ ಹೋಗುವ ಸಿಎಂ ಹಾಗೂ ಸಚಿವರು ಕೇಂದ್ರದಿಂದ ಲಸಿಕೆ ತರಿಸಿ ವಿತರಿಸಲು ನಿರ್ಲಕ್ಷ್ಯ ತೋರುತ್ತಿರುವುದು ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೂನ್‌ 21ರಂದು ರಾಜ್ಯದ 11 ಲಕ್ಷ ಜನರಿಗೆ ಲಸಿಕೆ ನೀಡಲಾಗಿತ್ತು. ನಂತರ ಅದು ನಿಧಾನವಾಗಿ ಕಡಿಮೆಯಾಗಿ ಈಗ 1 ಲಕ್ಷಕ್ಕೆ ಬಂದು ನಿಂತಿದೆ. ಈವರೆಗೆ ಕೇವಲ 30% ಜನರಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಇದೇ ರೀತಿ ಲಸಿಕೆ ನೀಡುವ ಪ್ರಮಾಣವನ್ನು ಕಡಿಮೆ ಮಾಡುತ್ತಾ ಹೋದರೆ ಮೂರು ವರ್ಷವಾದರೂ ಎಲ್ಲರಿಗೂ ಲಸಿಕೆ ಸಿಗುವುದಿಲ್ಲ.

ದಿನಕ್ಕೆ 11 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದ್ದರೂ ಕೇವಲ ಒಂದು ಲಕ್ಷ ಲಸಿಕೆ ನೀಡುತ್ತಿರುವುದಕ್ಕೆ ಕಾರಣವೇನು? ಲಸಿಕೆ ಕೊರತೆಯಿಲ್ಲ ಎಂದು ಸುಳ್ಳು ಹೇಳಿ ಜನತೆಯನ್ನು ವಂಚಿಸುತ್ತಿರುವ ಆರೋಗ್ಯ ಸಚಿವರಿಗೆ ನಾಚಿಕೆಯಾಗಬೇಕು ಎಂದು ಶಾಂತಲಾ ದಾಮ್ಲೆಯವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಎಎಪಿಯ ರಾಜ್ಯ ಯುವಘಟಕದ ಅಧ್ಯಕ್ಷರಾದ ಮುಕುಂದ್‌ ಗೌಡರವರು ಮಾತನಾಡಿ, “ರಾಜ್ಯ ಜನರು ಈಗಲೂ ಕೊರೊನಾ ಆತಂಕದಲ್ಲಿ ಬದುಕುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಕೊರೊನಾ ರೋಗಿಗಳಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದರಲ್ಲಿ ವಿಫಲವಾಗಿದ್ದ ಸರ್ಕಾರವು ಈ ಲಸಿಕೆ ನೀಡುವುದರಲ್ಲಿಯೂ ವಿಫಲವಾಗಿದೆ. ಕಮಿಷನ್‌ ಆಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಯನ್ನು ಮಾರಿಕೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಕೃತಕ ಅಭಾವ ಸೃಷ್ಟಿಸಿದೆ.

ಇವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ರಾಜ್ಯದ ಜನರು ಆಡಳಿತದ ವಿರುದ್ಧ ನಿಲುವು ಹೊಂದಿದ್ದಾರೆ ಎಂಬುದು ಸರ್ಕಾರಕ್ಕೆ ಗೊತ್ತಿದೆ. ಸೋಲಿನ ಭಯದಿಂದ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಮುಂದೂಡಿದೆ. ಮಾರ್ಕೆಟ್‌, ಮಾಲ್‌ ಮುಂತಾದ ಜನಸಂದಣಿ ಪ್ರದೇಶಗಳಿಗೆ ಅವಕಾಶ ನೀಡಿರುವಾಗ, ಚುನಾವಣೆ ನಡೆಸಲು ಮಾತ್ರ ಕೋವಿಡ್‌ ನೆಪ ಹೇಳುತ್ತಿರುವುದು ಆಶ್ಚರ್ಯಕರವಾಗಿದೆ” ಎಂದು ಹೇಳಿದರು.

ಎಎಪಿಯ ನೀತಿ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರಕಾಶ್‌ ನೆಡುಂಗಡಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ