NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ನಾಯಕರ ದುರುದ್ದೇಶ ಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರ : ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯ ರ್ಥಿಯನ್ನು ನಿಲ್ಲಿಸಲಾಯಿತು. ಕಾಂಗ್ರೆಸ್-ಬಿಜೆಪಿ ಹೇಳಿರುವಂತೆ ನಾನು ಉಪ ಚುನಾವಣೆ ಫಲಿತಾಂಶಕ್ಕೆ ಮಹತ್ವ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ 2023ರ ಚುನಾವಣೆ ಮೇಲೆ ಕೇಂದ್ರೀ ಕೃತವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಕಾಂಗ್ರೆಸ್ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್‌ಗೆ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿಲ್ಲವೆ ಎಂದರು.

ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ನಮ್ಮ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ಪ್ರಚಾರದ ವೇಳೆ ನಾನು ಐವತ್ತಕ್ಕೂ ಹೆಚ್ಚು ಹಳ್ಳಿ ಗಳಿಗೆ ಭೇಟಿ ನೀಡಿದ್ದೆ . ಜನರ ಸ್ಪಂದನೆ ಉತ್ತಮವಾಗಿತ್ತು. ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನೀಡಿದ್ದ ನೀರಾವ ರಿಯೋಜನೆಗಳ ಬಗ್ಗೆ, ನಾನು ಮುಖ್ಯ ಮಂತ್ರಿ ಆಗಿದ್ದಾಗ ನೀಡಿದ ಕಾರ್ಯಕ್ರಮಗಳು ಹಾಗೂ ಸಾಲ ಮನ್ನಾ ಬಗ್ಗೆ ಪ್ರತಿ ಹಳ್ಳಿಯಲ್ಲೂ ಜನ ಮಾತನಾಡಿದ್ದರು. ಸ್ವತಃ ಜನರೇ ನನ್ನ ಬಳಿಗೆ ಬಂದು ಈ ಬಗ್ಗೆ ಮಾತನಾಡುತ್ತಿದ್ದರು. ಆದರೂ ಈ ರೀತಿಯ ಫಲಿತಾಂಶ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವ ಮನಗೂಳಿ ಮಗನ ಹೈಜಾಕ್: ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು ಕಾಂಗ್ರೆಸ್ ಹೈಜಾಕ್‌ ಮಾಡಿತು.   ಈ ಕಾರಣಕ್ಕೆ ನಮಗೆ ಹಿನ್ನಡೆ ಉಂಟಾಯಿತು. ಆದರೂ ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ , ನನಗೆ ಆತಂಕವೂ ಇಲ್ಲ ಎಂದು ಹೇಳಿದರು.

ಹಾನಗಲ್‌ನಲ್ಲಿ ನಮಗೆ ನೆಲೆ ಇರಲಿಲ್ಲ . ಆದರೆ, ಸಿಂದಗಿಯಲ್ಲಿ ನಮ್ಮವರೇ ಶಾಸಕರಿದ್ದರು. ಯಾವ ಚುನಾವಣೆಯಲ್ಲೂ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಬಂದಿರಲಿಲ್ಲ. ಯಾವಾಗಲೂ ಇಲ್ಲಿ ಜೆಡಿಎಸ್-ಬಿಜೆಪಿ ನಡುವೆ ಸ್ಪರ್ಧೆ ಇರುತ್ತಿತ್ತು ಎಂದು ತಿಳಿಸಿದರು.

ಸಾಮಾನ್ಯವಾಗಿ ಎಲ್ಲರಿಗೂ ತಿಳಿದಂತೆ ಉಪ ಚುನಾವಣೆಗಳು ನಡೆಯುವ ಬಗೆಯೇ ಬೇರೆ, ಸಾರ್ವತ್ರಿಕ ಚುನಾವಣೆಗಳು ನಡೆಯುವ ರೀತಿಯೇ ಬೇರೆ ಎಂದ ಅವರು, ನಮ್ಮ ಪಕ್ಷ 2023ನೇ ವಿಧಾನಸಭೆ ಚುನಾವಣೆ ಮೇಲೆ ಪೂರ್ಣ ಗಮನ ಕೇಂದ್ರೀ ಕರಿಸಿದೆ. ಅದಕ್ಕೆ ಬಿಡದಿಯಲ್ಲಿ ಸಂಘಟನಾ ಕಾರ್ಯಗಾರವನ್ನೂ ನಡೆಸಲಾಯಿತು. ಈಗ ಪಕ್ಷದ ಸಂಘಟನೆಯತ್ತಲೇ ನಾವು ಗಮನ ಇರಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಉಪ ಚುನಾವಣೆಗಳು ನಡೆಯುವುದು ಹಣಬಲದಿಂದಲೇ ಎನ್ನುವುದು ಎಲ್ಲರೂ ಬಲ್ಲ ಸಂಗತಿ. ಸಿಂದಗಿಯಲ್ಲಿ ಕೊನೆ ಆಟ ಎಂದಿದ್ದ ಸಚಿವರೊಬ್ಬರ ಹೇಳಿಕೆಯನ್ನು ಮಾಧ್ಯಮಗಳೇ ವರದಿಮಾಡಿವೆ.

ಜತೆಗೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ಹಣದಹೊಳೆ ಹರಿದಿದೆ ಎನ್ನುವುದನ್ನು ಎಲ್ಲ ಮಾಧ್ಯಮಗಳೂ ವರದಿಮಾಡಿವೆ. ಬಿಜೆಪಿ- ಕಾಂಗ್ರೆಸ್ ಎರಡೂ ಪಕ್ಷಗಳು ಅಧಿಕಾರದಲ್ಲಿದ್ದಾಗ ಇದೇ ಆಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿದ್ದಾಗ ನಡೆದ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಗಳ ಕಥೆ ಏನ್ನೆನ್ನುವುದು ತಿಳಿದ ವಿಷಯವೇ ಎಂದು ಕುಮಾರಸ್ವಾಮಿ ಕಾಂಗ್ರೆಸ್‌ ಕಾಲದ ಘಟನೆಯನ್ನು ನೆನಪಿಸಿದರು. ಜತೆಗೆ ಈ  ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ . ಹೀಗಾಗಿ ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲಾರೆ ಎಂದರು.

ನವೆಂಬರ್‌ 8ರಿಂದ ಜಿಲ್ಲಾವಾರು ಸಭೆ: ಇದೇ ನವೆಂಬರ್ 8ರಿಂದ 16ರವರೆಗೆ ಪಕ್ಷದ ಕಚೇರಿಯಲ್ಲಿ ಪ್ರತಿ ಜಿಲ್ಲಾವಾರು ಸಭೆಗಳನ್ನು ಕರೆಯಲಾಗಿದೆ. ಪ್ರತಿದಿನ ನಾಲ್ಕು ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದೇನೆ  ಪದಾಧಿಕಾರಿಗಳು ಹಾಗೂ ಸಂಭವನೀಯ ಅಭ್ಯರ್ಥಿಗಳು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಇನ್ನು ತಳಮಟ್ಟದಿಂದ ಪಕ್ಷವನ್ನು ಕಟ್ಟುವುದು ಹಾಗೂ ವಿಷಯಾಧಾರಿತವಾಗಿ ಹೋರಾಟ ನಡೆಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ 2023ಕ್ಕೆ ಪಕ್ಷವನ್ನು ಸಜ್ಜು ಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ