CrimeNEWSನಮ್ಮರಾಜ್ಯ

ಮಾಜಿ ಸಿಎಂ ಬಿಎಸ್‌ವೈ, ಕುಟುಂಬದವರ ವಿರುದ್ಧ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ಕೋರಿದ್ದ ರಿಟ್ ಅರ್ಜಿ ವಾಪಸ್ ಪಡೆದ ಟಿ.ಜೆ.ಅಬ್ರಹಾಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕುಟುಂಬವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ಕೋರಿದ್ದ ರಿಟ್ ಅರ್ಜಿಯನ್ನು ದೂರುದಾರ ಟಿ.ಜೆ.ಅಬ್ರಹಾಂ ವಾಪಸ್ ಪಡೆದಿದ್ದಾರೆ.

ತಾಂತ್ರಿಕ ಕಾರಣದಿಂದ ಟಿ.ಜೆ.ಅಬ್ರಹಾಂ ರಿಟ್ ಅರ್ಜಿ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದು ಅರ್ಜಿಯಲ್ಲಿ ಈಗಾಗಲೇ ಬಿಎಸ್‌ವೈ ಸೇರಿದಂತೆ ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಡಾ.ಜಿ.ಸಿ.ಪ್ರಕಾಶ್, ಎಸ್​​.ಟಿ.ಸೋಮಶೇಖರ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿಗೆ ನೋಟಿಸ್ ಜಾರಿ ಮಾಡಲಾಗಿದೆ.

ದೂರುದಾರ ಅಬ್ರಹಾಂ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿದ್ದ ರಿಟ್ ಅರ್ಜಿ ವಾಪಸ್ ಪಡೆದಿದ್ದಾರೆ.

ಯಡಿಯೂರಪ್ಪ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಅಬ್ರಹಾಂ ಸಿಬಿಐ ಅಥವಾ ಎಸ್ಐಟಿ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಮತ್ತೊಂದು ಅರ್ಜಿಯಲ್ಲಿ ಈಗಾಗಲೇ ಹೈಕೋರ್ಟ್ ಬಿಎಸ್​ವೈ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ.  ಆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಕೋರಿದ್ದ ರಿಟ್ ಅರ್ಜಿ ವಾಪಸ್ ತೆಗೆದುಕೊಂಡಿದ್ದಾರೆ.

ಈ ಹಿಂದೆ ಅಬ್ರಹಾಂ ಈ ವಿಚಾರ ಕುರಿತಾಗಿ ಖಾಸಗಿ ದೂರು ಸಲ್ಲಿಸಿದ್ದರು. ಆದರೆ, ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೂರು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿದ್ದ ಅರ್ಜಿ ಸಂಬಂಧ ನೋಟಿಸ್ ಜಾರಿಯಾದ ಹಿನ್ನೆಲೆ ಸಿಬಿಐ ತನಿಖೆ ಕೋರಿದ್ದ ರಿಟ್ ಅರ್ಜಿಯನ್ನು  ಹಿಂಪಡೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.

ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ