NEWSನಮ್ಮರಾಜ್ಯರಾಜಕೀಯ

ವಿಶೇಷ ಅಧಿವೇಶನ ಕರೆಯಲು ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಡಿನ ಕೋವಿಡ್‌ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ “ಕನ್ನಡ, ಕನ್ನಡಿಗ, ಕರ್ನಾಟಕ”ದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಿಶೇಷ ಅಧಿವೇಶನ ಕರೆಯುವ ಕುರಿತು ಸಿಎಂ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ.

ನೀರಾವರಿ ಯೋಜನೆಯಲ್ಲಿ 20,000 ಕೋಟಿ ರೂ. ಕಿಕ್ ಬ್ಯಾಕ್ ಆರೋಪ, ಮುಖ್ಯಮಂತ್ರಿಗಳ ಕುಟುಂಬದವರ ವಿರುದ್ಧವೇ ಸ್ವಪಕ್ಷದ ಹಿರಿಯ ನಾಯಕರೇ ಆರೋಪ ಮಾಡಿದ್ದರೂ ತನಿಖೆಗೆ ಮುಂದಾಗದ ಸರ್ಕಾರದ ನಡೆ, ಅಬಕಾರಿ ಇಲಾಖೆಯಲ್ಲಿನ ಲಂಚ ಹಗರಣ ಇವುಗಳ ಬಗ್ಗೆ ಸಮರ್ಪಕ ಚರ್ಚೆ ನಡೆಯಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೊರೊನಾ ಲಾಕ್ ಡೌನ್ ನಲ್ಲಿ ನೀಡಿದ ಪರಿಹಾರ ಸಮರ್ಪಕವಾಗಿಲ್ಲ. ಅಲ್ಲದೇ ಮೂರನೇ ಅಲೆ ಬಗ್ಗೆ ಸರ್ಕಾರ ಕೈಗೊಂಡಿರುವ ಸಿದ್ಧತೆಗಳಿಗಾದರೂ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆಯೂ ಚರ್ಚಿಸ ಬೇಕಿದೆ ಹಾಗಾಗಿ ವಿಶೇಷ ಅಧಿವೇಶನವನ್ನು ತಕ್ಷಣ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ