NEWSನಮ್ಮರಾಜ್ಯರಾಜಕೀಯ

ಸರ್ಕಾರಕ್ಕೆ ಎಚ್ಚರಿಕೆ ನೀಡಲು: ಅ.20ರಂದು ಎಎಪಿಯಿಂದ ರಸ್ತೆ ಗುಂಡಿಗಳ ಹಬ್ಬ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದೆಲ್ಲಡೆ ರಸ್ತೆ ಗುಂಡಿಗಳು ವಿಪರೀತ ಹೆಚ್ಚಾಗಿ, ಜೀವ ತೆಗೆಯುವಷ್ಟು ಅಪಾಯಕಾರಿ ಮಟ್ಟ ತಲುಪಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಬುಧವಾರ (ಅ.20) ರಸ್ತೆ ಗುಂಡಿಗಳ ಹಬ್ಬ ಹಮ್ಮಿಕೊಂಡಿದೆ.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ನೇತೃತ್ವದಲ್ಲಿ ಈ ಅಭಿಯಾನ ನಡೆಯಲಿದೆ. ಅಕ್ಟೋಬರ್‌ 20ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆಯವರೆಗೆ ಬೆಂಗಳೂರಿನ ಎಲ್ಲಾ ಹಳೆಯ 198 ವಾರ್ಡ್‌ಗಳಲ್ಲಿ ಅಭಿಯಾನ ನಡೆಯಲ್ಲಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಅಪಾಯಕಾರಿ ಗುಂಡಿಗಳನ್ನು ಗುರುತಿಸಿ, ಅದರ ಸುತ್ತ ರಂಗೋಲಿ ಹಾಕಿ, ದೀಪ ಹಚ್ಚುವ ಮೂಲಕ ರಸ್ತೆಗುಂಡಿಗಳ ಹಬ್ಬ ನೆರವೇರಲಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರವು 20,000 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದರೂ ರಾಜಧಾನಿಯ ರಸ್ತೆಗಳು ದುಸ್ಥಿತಿಯಲ್ಲಿ ಇರುವುದರ ಕುರಿತು ಜಾಗೃತಿ ಮೂಡಿಸಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಜನಪ್ರತಿನಿಧಿಗಳು ತಮ್ಮ ಜೇಬು ತುಂಬಿಸಿಕೊಳ್ಳಲು ಕಳಪೆ ಕಾಮಗಾರಿ ಮಾಡಿರುವುದನ್ನು ಆಮ್‌ ಆದ್ಮಿ ಪಾರ್ಟಿಯು ಜನರ ಮುಂದೆ ಬಯಲು ಮಾಡಲಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ತಿಳಿಸಿದ್ದಾರೆ.

Leave a Reply

error: Content is protected !!
LATEST
ಜೂ.2ರಂದು ಇಪಿಎಸ್ ಪಿಂಚಣಿದಾರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ಬೀಜ, ಗೊಬ್ಬರ ವಿತರಣೆಯಲ್ಲಿ ಅನ್ಯಾಯ ಆದರೆ ಕಚೇರಿಗೆ ಬೀಗ: ರೈತರ ಎಚ್ಚರಿಕೆ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ 6ದಿನಗಳು ಎಸ್‌ಐಟಿ ಕಸ್ಟಡಿಗೆ : ಜನಪ್ರತಿನಿಧಿಗಳ ನ್ಯಾಯಾಲ ಆದೇಶ ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಣ್ಣ  ವಾಲ್ಮೀಕಿ ನಿಗಮದ 94 ಕೋಟಿ ರೂ. ಅಕ್ರಮ ಪ್ರಕರಣ: ಸಿಬಿಐಗೆ ವರ್ಗಾವಣೆ ಸಾಧ್ಯತೆ ಸರ್ಕಾರಿ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹಿಂಬಾಕಿ ಪಾವತಿಸಲು ಸರ್ಕಾರಕ್ಕೆ ಜೂನ್‌ 15ರ ಗಡುವು ಕೊಟ್ಟು ಎಚ್ಚರಿಕೆ ನೀ... BMTC: ಕೇರಳ ಯುವಕರಿಂದ ಸಂಸ್ಥೆಯ ಎಲೆಕ್ಟ್ರಿಕ್ ಬಸ್​​ಗಳ ಚಾಲನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ BMTC: ನೌಕರರ ರಜೆ ನಿರ್ವಹಣಾ ವ್ಯವಸ್ಥೆ (LMS) ಬದಲಾವಣೆ ಮಾಡಿ ಎಂಡಿ ಆದೇಶ ಲಂಚ ಸ್ವೀಕರಿಸುವಾಗ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ KSRTC: ಪ್ರಯಾಣಿಕರಿಗೆ ಟಿಕೆಟ್ ನೀಡದ ಆರೋಪ ಸಾಬೀತ್‌ - ಕಂಡಕ್ಟರ್‌ ವಜಾ ಆದೇಶ ಎತ್ತಿ ಹಿಡಿದ ಹೈ ಕೋರ್ಟ್‌