CrimeNEWSನಮ್ಮರಾಜ್ಯ

ರಾಯಚೂರಿನಿಂದ ಬಾಲ್ಕಿಗೆ ವರ್ಗಾವಣೆ: ಮನನೊಂದ ಸಾರಿಗೆ ನೌಕರ ಆತ್ಮಹತ್ಯೆ ಯತ್ನ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಕಳೆದ ಏಪ್ರಿಲ್‌ನಲ್ಲಿ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಿ ವರ್ಗಾವಣೆ  ಮಾಡಿರುವುದಕ್ಕೆ ಮನನೊಂದ ಎನ್‍ಇಕೆಆರ್ಟಿಸಿ  ನೌಕರನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ.

ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನಸ್ ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನು ಕಸಿದು ಎಸೆದಿದ್ದಾರೆ.

ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದರು ಎಂದು ಆರೋಪಿಸಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಅಲ್ಲದೆ ರಾಯಚೂರಿನಿಂದ ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಏಳು ಮಕ್ಕಳನ್ನು ಕಟ್ಟಿಕೊಂಡು ಬಾಲ್ಕಿಗೆ ಹೇಗೆ ಹೋಗಲಿ ಅಂತ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾನೆ. ಅಲ್ಲದೆ ಏಕಾಏಕಿ ವರ್ಗಾವಣೆ ಶಿಕ್ಷೆಗೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಏಪ್ರಿಲ್‌ ತಿಂಗಳಿನಿಂದ ವೇತನವನ್ನು ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಅಂತ ಚಾಲಕ ಯೂನಸ್ ಆರೋಪಿಸಿದ್ದಾರೆ. ವಿಷಯ ತಿಳಿದು ಕಚೇರಿಗೆ ಬಂದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಸಿಬ್ಬಂದಿಯನ್ನು ಸಮಾಧಾನ ಪಡಿಸಲು ಯತ್ನಿಸಿದರು. ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ ನಮ್ಮಿಂದ ಕಿರುಕುಳ ಆಗಿಲ್ಲ ಅಂತ ವೆಂಕಟೇಶ್ ಹೇಳಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್