NEWSನಮ್ಮರಾಜ್ಯ

ಸಾರಿಗೆ ನೌಕರರ ಅಕ್ಟೋಬರ್‌ ವೇತನ ನವೆಂಬರ್‌ 2ರಂದೇ ಪಾವತಿಸಲು ಆದೇಶ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗದ ಎಲ್ಲಾ ಶಾಖಾ ಮುಖ್ಯಸ್ಥರು ಮತ್ತು ಘಟಕ ವ್ಯವಸ್ಥಾಪಕರು ಅಕ್ಟೋಬರ್ 2021ರ ಮಾಹೆಯ ವೇತನದ ಬಿಲ್ಲು ತಯಾರಿಸಿ ಅಕ್ಟೋಬರ್‌ 28ರೊಳಗೆ ಸಂಬಂಧಪಟ್ಟ ಲೆಕ್ಕಾಧಿಕಾರಿಗಳಿಗೆ ತಲುಪಿಸಲು ವಿಭಾಗೀಯ ನಿತ್ರಣಾಧಿಕಾರಿ ಆದೇಶಿಸಿದ್ದಾರೆ.

ನವೆಂಬರ್ 5 , 6ರಂದು ದೀಪಾವಳಿ ಹಬ್ಬ ಇರುವುದರಿಂದ ಮುಖ್ಯ ಲೆಕ್ಕಾಧಿಕಾರಿಗಳು ಅಕ್ಟೋಬರ್ ತಿಂಗಳಿನ ಅಧಿಕಾರಿಗಳು ಮತ್ತು ನೌಕರರ ಹಾಜರಾತಿಯನ್ನು ಅಕ್ಟೋಬರ್ 25ರಂದು ಅಂತಿಮಗೊಳಿಸಿ, ತಯಾರಿಸಿದ ಮಾಹಿತಿಯನ್ನು ಕೇಂದ್ರ ಕಚೇರಿಗೆ ಒದಗಿಸಬೇಕು.

ಇನ್ನು ನವೆಂಬರ್ 2ರಂದು ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಡ್ಡಾಯವಾಗಿ ವೇತನವನ್ನು ಪಾವತಿಸಬೇಕು ಎಂದು ಸೂಚನೆ ಇದೆ.

ಹೀಗಾಗಿ ಎಲ್ಲಾ ಸಿಬ್ಬಂದಿಗಳ ಹಾಗೂ ಅಧಿಕಾರಿಗಳ ಹಾಜರಾತಿಯನ್ನು ಅಕ್ಟೋಬರ್ 25ರಂದು ಅಂತಿಮಗೊಳಿಸಿ ಅ. 28ರೊಳಗೆ ವೇತನದ ಬಿಲ್ಲುಗಳನ್ನು ತಯಾರಿಸಿ ಸಹಾಯಕ ಲೆಕ್ಕಾಧಿಕಾರಿಗಳಿಂದ ಮಂಜೂರಾತಿ ಪಡೆದು ಎಲ್ಲಾ ಸಿಬ್ಬಂದಿ ಅಧಿಕಾರಿಗಳಿಗೆ ಕಡ್ಡಾಯವಾಗಿ ನವೆಂಬರ್‌ 2ರಂದೇ ವೇತನ ಪಾವತಿ ಮಾಡುವಂತೆ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಇನ್ನು ಆಗಸ್ಟ್‌ ಮತ್ತು ಸೆಪೆಂಬರ್‌ ತಿಂಗಳುಗಳ ಅರ್ಧವೇತನವಷ್ಟೇ ನೌಕರರ ಕೈ ಸೇರಿದ್ದು, ಇನ್ನೂ ಒಟ್ಟಾರೆ ಒಂದು ತಿಂಗಳ ವೇತನ ಬಾಕಿ ಇದೆ. ಅದನ್ನು ಕೂಡಲೇ ಪಾವತಿಸ ಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...